ಬೆಂಗಳೂರು: ಸ್ಯಾಂಡಲ್ವುಡ್ ನಿರ್ಮಾಪಕ, ನಟ ರಾಕ್ಲೈನ್ ವೆಂಕಟೇಶ್ ಅವರಿಗೆ ಸೋಂಕು ದೃಢಪಟ್ಟಿದ್ದು ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗಷ್ಟೇ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಸೋಂಕು ತಗುಲಿದ್ದು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಮಲತಾ ಅವರ ನಿಕಟವರ್ತಿಯಾಗಿರುವ ರಾಕ್ಲೈನ್ ವೆಂಕಟೇಶ್ ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇನ್ನು ಇದರಿಂದ ಇನ್ನೆಷ್ಟು ಜನರಿಗೆ ಸೋಂಕು ತಗುಲಿದೆಯೋ ಎಂಬ ಗೊಂದಲ ಎಲ್ಲರನ್ನು ಕಾಡತೊಡಗಿದೆ.
ಈ ನಡುವೆ ರಾಕ್ಲೈನ್ ವೆಂಕಟೇಶ್ ಪತ್ನಿಗೂ ಸೋಂಕು ತಗುಲಿದ್ದು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಕ್ಲೈನ್ ವೆಂಕಟೇಶ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಲತಾ ಅವರಿಗೆ ಸೋಮವಾರ ಕೊರೊನಾ ಸೋಂಕು ತಗುಲಿರುವ ವರದಿ ಬಂದ ನಂತರ ರಾಕ್ ಲೈನ್ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.