CRIMENEWSನಮ್ಮಜಿಲ್ಲೆ

ತನ್ನ ಅಪ್ರಾಪ್ತ ತಂಗಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಅಣ್ಣ- ಗಂಡು ಮಗವಿಗೆ ಜನ್ಮವಿತ್ತ ಸಹೋದರಿ

ವಿಜಯಪಥ ಸಮಗ್ರ ಸುದ್ದಿ

ಕೊಪ್ಪಳ: ಮನೆಯಲ್ಲಿ ಯಾರೂ ಇಲ್ಲದಾಗ ತನ್ನ ಸಹೋದರಿ ಅಪ್ರಾಪ್ತ ತಂಗಿಯ ಮೇಲೆಯೇ ನಿರಂತರವಾಗಿ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಅಣ್ಣನೊಬ್ಬ ಜೈಲು ಸೇರಿದ್ದಾನೆ.

ಇನ್ನು ಇತ್ತ ಗರ್ಭವತಿಯಾಗಿದ್ದ ಬಾಲಕಿ ವಾರದ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಸಂಬಂಧ ಆರೋಪಿಯನ್ನು  ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕಳೆದ ಅಕ್ಟೋಬರ್​ 26ರ ಬೆಳಗ್ಗೆ ಮನೆ ಕೆಲಸ ಮಾಡುವಾಗ ಬಾಲಕಿ ಜಾರಿ ಬಿದ್ದಿದ್ದಳು. ಹೀಗಾಗಿ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಬಾಲಕಿಯ ಬೆನ್ನಿಗೆ ಗಾಯವಾಗಿದ್ದು ಸ್ಕ್ಯಾನಿಂಗ್ ಮಾಡುವಂತೆ ಸೂಚಿಸಿದರು.

ಆ ನಂತರ ಅಕ್ಟೋಬರ್ 30ರಂದು ಬಾಲಕಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿದಾಗ ಹೊಟ್ಟೆಯಲ್ಲಿ ಮಗುವಿರುವುದು ಪತ್ತೆಯಾಗಿತ್ತು. ಅದೇ ದಿನ ರಾತ್ರಿ ಗಂಡು ಮಗುವಿಗೆ ಆಕೆ ಜನ್ಮ ನೀಡಿದ್ದಾಳೆ.

ತಾನೂ ಗರ್ಭೀಣಿಯಾಗಿದ್ದ ವಿಷಯ ತನಗೆ ಗೊತ್ತಿಲ್ಲ ಎಂದು ಬಾಲಕಿ ಹೇಳಿದ್ದಾಳೆ. ಆದರೆ ಯಾರೂ ಇಲ್ಲದಾಗ ತನ್ನ ಮೇಲೆ ಅಣ್ಣ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದು ಬಾಲಕಿ ಪೋಷಕರಿಗೆ ತಿಳಿಸಿದ್ದಾಳೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!