NEWSನಮ್ಮಜಿಲ್ಲೆ

ಮೈಸೂರು: ಅತ್ತಹಳ್ಳಿ ಗ್ರಾಮದ ಗರ್ಭಿಣಿಗೆ ಕೊರೊನಾ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ (ಮೈಸೂರು):  ಬನ್ನೂರು ಸಮೀಪದ ಅತ್ತಹಳ್ಳಿ ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಗ್ರಾಮದ ಸೋಂಕಿತರ ಬೀದಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಕೊರೊನಾ ಸೋಂಕಿತರನ್ನು ಮೈಸೂರಿನ ನಿಗದಿತ ಕೋವಿಡ್‌ ಆಸ್ಪತ್ರೆಗೆ ಗುರುವಾರ ಮಧ್ಯಾಹ್ನ ಕರೆದುಕೊಂಡು ಹೋಗಿ ದಾಖಲಿಸಲಾಗಿದೆ.

ಸೋಂಕಿತರು ಗರ್ಭಿಣಿ ಆಗಿದ್ದು, ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ಇತ್ತೀಚೆಗೆ ಹೋಗಿದ್ದರು. ಈ  ವೇಳೆ ಕೊರೊನಾ ಸೋಂಕು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅವರ ಮನೆಯವರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದ್ದು, ಅವರ ಗಂಟಲು ದ್ರವವನ್ನು ಕೋವಿಡ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಇದರೊಂದಿಗೆ  ಇದೇ ಗ್ರಾಮದ ಮತ್ತೊಬ್ಬ ಗರ್ಭಿಣಿಗೂ ಕೊರೊನಾ ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಅವರ ಗಂಟಲು ದ್ರವವನ್ನು ಕೋವಿಡ್‌ ಪರೀಕ್ಷೆಗೆ ಕಳುಹಿಸಲಾಗಿದೆ.

ಒಟ್ಟಾರೆ ಕೊರೊನಾ ಗ್ರಾಮಗ್ರಾಮಕ್ಕೂ ಹಬ್ಬುತ್ತಿದ್ದು, ಜನರು ತಮ್ಮ ಜೀವನ ಜೀವವನ್ನು ಅತ್ಯಂತ ಜಾಗರೂಕತೆಯಿಂದ ನಿಭಾಯಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ನಾವು ಹಳ್ಳಿಯಲ್ಲಿ ಇದ್ದೇವೆ ನಮಗೆ ಕೊರೊನಾ ಸೋಂಕು ಬರುವುದಿಲ್ಲ ಎಂಬ ಭ್ರಮೆಯನ್ನು ಬಿಟ್ಟು ಆರೋಗ್ಯದ ಕಡೆಗೆ ಹೆಚ್ಚಿನ ಗಮನಕೊಡಬೇಕಿದೆ.

1 Comment

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...