NEWSನಮ್ಮರಾಜ್ಯರಾಜಕೀಯವಿಜ್ಞಾನಶಿಕ್ಷಣ-

ಅಂತಿಮ ವರ್ಷದ ಪರೀಕ್ಷೆ ಹೊರತುಪಡಿಸಿ ಎಲ್ಲಾ ಪರೀಕ್ಷೆಗಳು ರದ್ದು, ವಿದ್ಯಾರ್ಥಿಗಳು ಪಾಸ್‌

ಜುಲೈ 30, 31ಕ್ಕೆ CET ಪರೀಕ್ಷೆ l ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್-19 ವೈರಸ್‌ ಎಲ್ಲೆಡೆ ವಕ್ಕರಿಸುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಮಹತ್ವದ ನಿರ್ಧಾರ ಕೈಕೊಂಡಿದೆ. 2019-20ನೇ ಸಾಲಿನಲ್ಲಿ ಇಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ನಡೆಸದೆ ಹಾಗೆಯೇ ಅವರೆಲ್ಲರನ್ನೂ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ ತಿಳಿಸಿದ್ದಾರೆ.

ಜತೆಗೆ 2019-20ನೇ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲಾ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಸರಕಾರ ಗಣನೆಗೆ ತೆಗೆದುಕೊಂಡಿದೆ. ಕೋವಿಡ್-19 ಹಿನ್ನಲೆಯಲ್ಲಿ ಅವರನ್ನು ಆರೋಗ್ಯವಾಗಿಟ್ಟುಕೊಳ್ಳುವುದು ಮತ್ತು ಅವರ ಭವಿಷ್ಯವನ್ನು ರಕ್ಷಿಸುವುದು ಸರಕಾರದ ಉದ್ದೇಶವಾಗಿತ್ತು. ಈ ಬಗ್ಗೆ ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.

ತೇರ್ಗಡೆ ವಿಧಾನ ಹೇಗೆ ?
ಮಧ್ಯಂತರ ಸೆಮಿಸ್ಟರ್‌/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ (internal marks) ಮತ್ತು ಹಿಂದಿನ ಸೆಮಿಸ್ಟರ್‌/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ (comprehensive evaluation) ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು.

ಒಂದು ವೇಳೆ ಈ ಪ್ರಕ್ರಿಯೆಯ ಬಗ್ಗೆ ಯಾರೇ ವಿದ್ಯಾರ್ಥಿಗಳಿಗೆ ತಕರಾರು ಇದ್ದರೆ, ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ಭಾವನೆ ಇದ್ದರೆ, ಅಂತಹ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು. ಜತೆಗೆ ಸಮಗ್ರ ಮೌಲ್ಯಮಾಪನದಲ್ಲಿಯೂ (comprehensive evaluation) ಉತ್ತೀರ್ಣರಾಗದ ವಿದ್ಯಾರ್ಥಿಗಳು, ಫೇಲ್‌ ಆದ ವಿಷಯಗಳ ಪರೀಕ್ಷೆಗಳನ್ನು ಮುಂದಿನ ಸೆಮಿಸ್ಟರ್‌ಗಳಲ್ಲಿ ಬರೆಯಲು ಅವಕಾಶ ನೀಡಲಾಗುತ್ತದೆ. ಬ್ಯಾಕ್‌ಲಾಗ್‌ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಕೊಡಲಾಗುತ್ತದೆ ಎಂದು ವಿವರಿಸಿದರು.

ಅಂತಿಮ ಸೆಮಿಸ್ಟರ್ ಪರೀಕ್ಷೆ ಅನಿವಾರ್ಯ 
ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ಮತ್ತು ಅವರ ಉದ್ಯೋಗ ಸೇರಿ ಅವರ ಭವಿಷ್ಯಕ್ಕೆ ಧಕ್ಕೆಯಾಗದಂತೆ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲೇಬೇಕು. ಉನ್ನತ ಶಿಕ್ಷಣ ಪದ್ಧತಿಯಲ್ಲಿ ಶೈಕ್ಷಣಿಕ ಮೌಲ್ಯಮಾಪನ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷಮತೆಯನ್ನು ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಉದ್ಯೋಗದಾತ ಕಂಪನಿಗಳು ಕೂಡ ಉದ್ಯೋಗಾಕಾಂಕ್ಷಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಅವರು ಗಳಿಸಿರುವ ಶ್ರೇಣಿಯನ್ನು ಗುರುತಿಸುತ್ತವೆ. ಇವರಿಗೆ ಪರೀಕ್ಷೆ ನಡೆಸದಿದ್ದರೆ ಭವಿಷ್ಯದಲ್ಲಿ ತೊಂದರೆಯಾಗುವುದು ಖಚಿತ. ಹೀಗಾಗಿ ಈ ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ವಿವಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸೆಪ್ಟೆಂಬರ್ 1ರಿಂದ ಆನ್‌ಲೈನ್‌ ತರಗತಿ
2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್’ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‌ಲೈನ್ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ಅಶ್ವಥ್‌ ನಾರಾಯಣ ತಿಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್