ಬೆಂಗಳೂರು:ಕೊರೊನಾ ಪರೀಕ್ಷೆಗೆ ಒಳಗಾದ ವ್ಯಕ್ತಿಗಳಿಗೆ ಪರೀಕ್ಷಾ ವರದಿ ಸಿಗುವುದು ಏಕೆ ತಡವಾಗುತ್ತಿದೆ ಎಂದು ಸರ್ಕಾರವನ್ನು ಹೈ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಕೊರೊನಾ ಪರೀಕ್ಷೆ ವರದಿ ತಡವಾಗುತ್ತಿದೆ ಜತೆಗೆ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ವಿಳಂಬವಾಗುತ್ತಿರುವುದಕ್ಕೆ ನೀವು ಏನು ಹೇಳುತ್ತೀರಿ ಎಂದು ಪ್ರಶ್ನಿಸಿರುವ ಹೈಕೋರ್ಟ್ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಳಿ ವಿವರ ಕೇಳಿದೆ.
ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಕೊರೊನಾ ಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ಆಲಿಸುವ ಸಂದರ್ಭದಲ್ಲಿ, ಲ್ಯಾಬ್ ಗಳಿಂದ ಕೊರೊನಾ ಪರೀಕ್ಷೆ ವರದಿ ಸಿಗುವುದು ವಿಳಂಬವಾದರೆ ಮತ್ತು ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ವಿಳಂಬವಾಗುತ್ತದೆ. ಇದರಿಂದ ಬಹಳ ಸಮಸ್ಯೆಯಾಗುವುದಿಲ್ಲ ಎಂದು ಕೇಳಿದೆ.
ಇಷ್ಟು ತಡವಾದಾಗ ಈ ಮಧ್ಯೆ ಕುಟುಂಬ ಸದಸ್ಯರಿಗೆ ಅಥವಾ ಬೇರೊಬ್ಬರಿಗೆ ಸೋಂಕಿತರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂದು ನ್ಯಾಯಾಲಯ ಹೇಳಿದೆ. ಕೊರೊನಾ ರೋಗಿಯ ಬಗ್ಗೆ ಮಾಹಿತಿ ಸಿಕ್ಕಿದ ನಂತರ ಆಸ್ಪತ್ರೆಗೆ ದಾಖಲಿಸಲು 12ರಿಂದ 14 ಗಂಟೆ ಬೇಕಾಗುತ್ತದೆ ಎಂದು ಬಿಬಿಎಂಪಿ ಪರ ವಕೀಲರು ವರದಿ ಸಲ್ಲಿಸಿದರು.
ಕೋವಿಡ್ 19 ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಬಿಬಿಎಂಪಿ ಅಥವಾ ಜಿಲ್ಲಾ ಆರೋಗ್ಯಾಧಿಕಾರಿಗಳು ಅಗತ್ಯವಿರುತ್ತಾರೆಯೇ ಎಂದು ಸಹ ಸರ್ಕಾರವನ್ನು ಹೈಕೋರ್ಟ್ ಕೇಳಿದೆ. ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುವ ವಿಚಾರವನ್ನು ಸಹ ನ್ಯಾಯಾಲಯ ಕೇಳಿತು. ಇಂತಹ ಆಸ್ಪತ್ರೆಗಳ ವಿರುದ್ಧ ವಿಚಾರಣೆ ನಡೆಸಿದರೆ ಜನರಿಗೆ ಮತ್ತು ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಿದಂತೆ ಆಗುತ್ತದೆ ಎಂದು ತಿಳಿಸಿದೆ.
ಇನ್ನು ಇತ್ತೀಚೆಗೆ ನಗರದ 9ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ಸುತ್ತಿ ಬೆಡ್ ಖಾಲಿ ಇಲ್ಲ ಕೊನೆಗೆ ಆಂಬುಲೆನ್ಸ್‌ನಲ್ಲೇ ಪ್ರಾಣ ಬಿಟ್ಟಿರುವ ಕೊರೊನಾ ಸೋಂಕಿತರನ್ನು ನಿರ್ಲಕ್ಷಿಸಿರುವ ಬಗ್ಗೆ ತನಿಖೆ ನಡೆಸುವಂತೆ ಮೌಖಿಕವಾಗಿ ಆದೇಶ ನೀಡಿದೆ. ಅಲ್ಲದೆ ಕೋವಿಡ್ ಪರೀಕ್ಷೆ ವಿಳಂಬವಾಗುತ್ತಿರವುದಕ್ಕೆ ಸೂಕ್ತ ವರದಿ ನೀಡುವಂತೆ ತಿಳಿಸಿ ಜುಲೈ 13ಕ್ಕೆ ಪ್ರಕರಣವನ್ನು ಮುಂದೂಡಿತು.
Report kodthara sir agadre ?