ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯಾದ್ಯಂತ ಶನಿವಾರ ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ.
ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಸವಿರಲಿದೆ. ಈ ವೇಳೆ ಸಾರ್ವಜನಿಕರು ಅನಗತ್ಯವಾಗಿ ಓಡಾಡ ಬಾರದು ಎಂದು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ದಿನಸಿ ಅಂಗಡಿ, ಹಣ್ಣು-ತರಕಾರಿ ಅಂಗಡಿ, ಮಾಂಸದಂಗಡಿ, ಔಷಧ ಮಳಿಗೆಗಳು ತೆರೆದಿರುತ್ತವೆ. ಈ ಅವಧಿಯಲ್ಲಿ ಸಾರ್ವಜನಿಕರು ಹೊರಗಡೆ ಓಡಾಟ ನಡೆಸಬೇಕಾದರೆ ಕಡ್ಡಾಯವಾಗಿ ಮಾಸ್ಕ್(ಮುಖಗವಸು) ಧರಿಸಿರಬೇಕು. ಸಾರ್ವಜನಿಕರು ಬಿಬಿಎಂಪಿ, ನಗರಪಾಲಿಕೆ ಪಟ್ಟಣ ಪಂಚಾಯಿತಿ, ಗ್ರಾಮಪಂಚಾಯಿತಿ ಸೇರಿ ಪೊಲೀಸ್, ಆರೋಗ್ಯಾಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಜನರು ಅನಗತ್ಯವಾಗಿ ಓಡಾಟ ಮಾಡಿದರೆ ಪೊಲೀಸ್ ಅಧಿಕಾರಿಗಳು ಅಂತಹವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ. ಈ ಲಾಕ್ ಡೌನ್ ಅನ್ನು ಯಶಸ್ವಿಯಾಗಲು ಎಲ್ಲರೂ ಸಹಕರಿಸಿ. ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಂದಾಗಬೇಕು ಎಂದು ತಿಳಿಸಿದ್ದಾರೆ.
Ayyo ayyyo