NEWSಕೃಷಿನಮ್ಮಜಿಲ್ಲೆರಾಜಕೀಯ

ಕಾವೇರಿ, ಕಬಿನಿ ನೀರು ಬಿಡುವ ಸಂಬಂಧ ಶೀಘ್ರದಲ್ಲೇ ಸಭೆ: ಸಚಿವ ಸೋಮಶೇಖರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯಲ್ಲಿ ಕಾವೇರಿ ಮತ್ತು ಕಬಿನಿ ಜಲಾಶಯದಿಂದ ನೀರು ಹರಿಸುವ ಸಂಬಂಧ ಕಾವೇರಿ ಮತ್ತು ಕಬಿನಿ ಜಲಾಶಯಗಳ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆದಷ್ಟು ಬೇಗ ಕರೆಯಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಟಿ.ಸೋಮಶೇಖರ್ ಹೇಳಿದರು.

ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿಗೆ ಜಿಲ್ಲಾಡಳಿತ ಮಾಡಿಕೊಂಡಿರುವ ಸಿದ್ಧತೆಗಳ ಪರಿಶೀಲನಾ ಸಭೆ ನಡೆಸಿದ ಅವರು, ನಂತರ ಮಾತನಾಡಿ ಕೆ.ಆರ್.ಎಸ್. ಜಲಾಯಶಯ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ವ್ಯಾಪ್ತಿಗೆ ಬರುತ್ತದೆ. ಅವರೊಂದಿಗೆ ಚರ್ಚಿಸಿ, ಕಬಿನಿ ಜಲಯಾಶಯದ ಸಭೆಯನ್ನು ಸಹ ನಡೆಸಲಾಗುವುದು ಎಂದರು.

ಮೆಕ್ಕೆಜೋಳ ಬೆಳೆದ ರೈತರಿಗೂ ಲಾಕ್‍ಡೌನ್ ಸಂದರ್ಭದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 5000 ರೂ.ಗಳ ಪ್ರೋತ್ಸಾಹಧನ ಘೋಷಣೆ ಮಾಡಿದೆ. ಈ ಮೊತ್ತ ಬೇಗ ರೈತರಿಗೆ ತಲುಪುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆಬೀಜ, ರಸಗೊಬ್ಬರ ಮುಂತಾದವುಗಳು ಕೊರತೆಯಾಗಬಾರದು, ಸಕಾಲಕ್ಕೆ ಬಿತ್ತನೆ ಕಾರ್ಯ ನಡೆಸಲು ಎಲ್ಲಾ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ನೀಡುವ ಪರಿಹಾರ ಇನ್ನೂ ಕೆಲವು ಕುಟುಂಬಂಗಳಿಗೆ ಕೊಡಬೇಕಾಗಿದೆ. ತಕ್ಷಣ ಅವರಿಗೆ ಪರಿಹಾರ ಮೊತ್ತ ಸಿಗಬೇಕು ಎಂದರು.

ರಸಗೊಬ್ಬರ, ಬಿತ್ತನೆ ಬೀಜದ ಕೊರತೆ ಇಲ್ಲ
ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆ ಇಲ್ಲ. ಜಿಲ್ಲೆಗೆ 1,04,900 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆ ಇದ್ದು, ಈಗಾಗಲೇ 98,920 ಮೆಟ್ರಿಕ್ ಟನ್ ಪೂರೈಕೆಯಾಗಿದೆ. ಈ ಪೈಕಿ 48,079 ಮೆಟ್ರಿಕ್ ಟನ್ ರಸಗೊಬ್ಬರ ವಿತರಣೆ ಮಾಡಲಾಗಿದ್ದು, ಇನ್ನೂ 50,841 ದಾಸ್ತಾನು ಇದೆ ಎಂದರು.

ಜಿಲ್ಲೆಗೆ ಒಟ್ಟು 91,831 ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇದೆ. ಹಲವಾರು ರೈತರು ತಮ್ಮಲ್ಲೇ ಇರುವ ಬಿತ್ತನೆ ಬೀಜವನ್ನು ಬಳಸುತ್ತಾರೆ. ಈ ಬಿತ್ತನೆ ಬೀಜದ ಬದಲಿ ಅನುಪಾತದ ಪ್ರಕಾರ ಪ್ರಸ್ತುತ ಬೇಡಿಕೆಯನ್ನು 37,692 ಕ್ವಿಂಟಾಲ್ ಎಂದು ಅಂದಾಜಿಸಲಾಗಿದೆ. 39,673 ಕ್ವಿಂಟಾಲ್ ದಾಸ್ತಾನು ಈಗಾಗಲೇ ಇರುವುದರಿಂದ ಯಾವುದೇ ಕೊರತೆ ಇಲ್ಲ ಎಂದರು.

ಜಂಟಿ ಕೃಷಿ ನಿರ್ದೇಶಕರಾದ ಡಾ.ಮಹಂತೇಶಪ್ಪ ಮಾತನಾಡಿ 2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಪ್ರಮುಖ ಬೆಳೆಗಳು ಭತ್ತ, ಜೋಳ, ರಾಗಿ, ಮುಸುಕಿನ ಜೋಳ, ನವಣೆ, ತೊಗರಿ, ಅಲಸಂದೆ, ಉದ್ದು, ಹೆಸರು, ಅವರೆ, ನೆಲಗಡಲೆ ಮುಂತಾದ ಪ್ರಮುಖ ಬೆಳೆಗಳಿಗೆ ಬಿತ್ತನೆ ಬೀಜವನ್ನು ರೈತರಿಗೆ ನೀಡುವುದರ ಜೊತೆಗೆ ಆನ್‍ಲೈನ್ ಮೂಲಕ ತರಬೇತಿಯನ್ನು ಮಾಡಲಾಗಿದೆ ಎಂದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...