ಬೆಂಗಳೂರು: ಸಿಎಂ ಗೃಹಕಚೇರಿ ಕೃಷ್ಣಾದ ಕೆಲ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದಿಂದ ಶುಕ್ರವಾರದಿಂದ ಹೋಂ ಕ್ವಾರಂಟೈನ್ ಆಗಿ ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆರೋಗ್ಯವನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಫೋನ್ ಮೂಲಕ ವಿಚಾರಿಸಿದರು.
ಇಂದು ಮಧ್ಯಾಹ್ನ ಫೋನ್ ಮಾಡಿದ ಎಚ್‌ಡಿಕೆ ನಿಮ್ಮ ಆರೋಗ್ಯದ ಬಗ್ಗೆಯೂ ಗಮನಕೊಡಿ ಎಂದು ಹೇಳಿದ್ದಾರೆ.
ಈ ವೇಳೆ ನಾನು ಆರೋಗ್ಯವಾಗಿದ್ದು ಆತಂಕ ಪಡುವ ಅಗತ್ಯವಿಲ್ಲ. ಹಾಗೆಯೇ ನೀವು ಕೂಡ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಎಂದು ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.