ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತ ಜಿಲ್ಲೆಗಳನ್ನು ಜುಲೈ 14 ರಾತ್ರಿಯಿಂದ 22ರವರೆಗೆ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧ
ಮೊದಲಾದ ನಿತ್ಯಬಳಕೆಯ ವಸ್ತುಗಳನ್ನು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಜತೆಗೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ಯಾವುದೆ ತೊಡಕಿಲ್ಲದೆ ನಡೆಯಲಿವೆ ಎಂದು ತಿಳಿಸಿದ್ದಾರೆ.
ನಿತ್ಯ ಬಳಕೆ ವಸ್ತುಗಳ ಖರೀದಿಸುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ನಿಯಮಗಳ ಮಾರ್ಗಸೂಚಿಗಳನ್ನು ಪಾಲಿಸಿ ಎಂದು ಮನವಿ ಮಾಡಿದ್ದಾರೆ.
ಈ ಅವಧಿಯಲ್ಲಿ ಅಗತ್ಯ ಸೇವೆಗಳಿಗೆ ಯಾವುದೆ ತೊಡಕಾಗುವುದಿಲ್ಲ. ಈ ಸಂಬಂಧ ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು. ಲಾಕ್ ಡೌನ್ ವೇಳೆ ಜನರು ಆತಂಕಕ್ಕೆ ಒಳಗಾಗದೇ ಸಹಕರಿಸಬೇಕು ಎಂದು ಬಿಎಸ್‌ವೈ ಕೋರಿಕೊಂಡಿದ್ದಾರೆ.