ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ನಟ ಅಮಿತಾಭ್ ಬಚ್ಚನ್ ಹಾಗೂ ಅವರ ಪುತ್ರ ನಟ ಅಭಿಷೇಕ್ ಬಚ್ಚನ್ ಇಬ್ಬರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಶನಿವಾರ ಸಂಜೆ ಮುಂಬೈನ ನಾನಾವತಿ ಆಸ್ಪತ್ರೆಗೆ ಅಪ್ಪ ಮಗ ಇಬ್ಬರನ್ನೂ ದಾಖಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಅವರಿಗೆ ಚಿಕಿತ್ದೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕುಟುಂಬಸ್ಥರು ಮತ್ತು ಸಿಬ್ಬಂದಿಗೂ ಪರೀಕ್ಷೆ ಮಾಡಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ. 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅಮಿತಾಭ್ ಬಚ್ಚನ್ ಟ್ವಿಟ್ ಮಾಡಿ ವಿನಂತಿಸಿದ್ದಾರೆ.