NEWSದೇಶ-ವಿದೇಶನಮ್ಮರಾಜ್ಯ

ಜುಲೈ 12- ರಾಜ್ಯದಲ್ಲಿ 2627 ಕೊರೊನಾ ಪಾಸಿಟಿವ್‌, 71 ಮಂದಿ ಮೃತ

ಬೆಂಗಳೂರಿನಲ್ಲಿ COVID-19 ತಾಂಡವ l 1525 ಜನರನ್ನು ವಕ್ಕರಿಸಿದ ಮಹಾಮಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವಮಾರಿ ಕೊರೊನಾ ರಾಜ್ಯದಲ್ಲಿ ಇಂದು ಕೂಡ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, 2627 ಹೊಸ ಸೋಂಕಿತರು ಭಾನುವಾರ ಪತ್ತೆಯಾಗಿದ್ದಾರೆ. ಇನ್ನು ಈವರೆಗೆ ರಾಜ್ಯದಲ್ಲಿ ಒಟ್ಟು 38843  ಮಂದಿ ಸೋಂಕಿಗೆ ಒಳಗಾಗಿದ್ದಾರೆ.

ಇಂದು 71 ಮಂದಿ ಸೋಂಕಿಗೆ ಬಲಿಯಾಗಿದ್ದು,  ಒಟ್ಟಾರೆ ಈವರೆಗೆ ರಾಜ್ಯದಲ್ಲಿ 688 ಮಂದಿ (ಅನ್ಯಕಾರಣಕ್ಕೆ 4 ಮಂದಿ ಸೇರಿ) ಮೃತಪಟ್ಟಿದ್ದಾರೆ.  ಇಂದು ರಾಜ್ಯದ 71 ಮಂದಿ ಅಸುನೀಗಿದ್ದಾರೆ. ಇನ್ನು ಬೆಂಗಳೂರಿನಲ್ಲಿ 1525, ದಕ್ಷಿಣ ಕನ್ನಡ 196, ಧಾರವಾಡ 129, ಯಾದಗಿರಿ 120, ಕಲಬುರಗಿ 79, ಬಳ್ಳಾರಿ 71, ರಾಯಚೂರು 48,  ಮೈಸೂರು 42, ಹಾಸನ್‌ 31, ಚಿಕ್ಕಬಳ್ಳಾಪುರ 39, ಹಾವೇರಿ 44, ಚಾಮರಾಜನಗರ 10, ರಾಮನಗರ 4 ಸೇರಿ ರಾಜ್ಯದಲ್ಲಿ 2627 ಮಂದಿ ಸೋಂಕಿಗೆ ಇಂದು ಒಳಗಾಗಿದ್ದಾರೆ.

38843 ಜನರ ಪೈಕಿ 15409 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 22746 ಸೋಂಕಿತರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನು ಬೆಂಗಳೂರಿನಲ್ಲಿ 45, ಮೈಸೂರು 3, ಹಾವೇರಿಯಲ್ಲಿ 2, ರಾಮನಗರದಲ್ಲಿ ಒಂದು ಸೇರಿ ಒಟ್ಟು 71ಮಂದಿ ಕೊರೊನಾಗೆ  ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಭಾನುವಾರ ಒಂದೇ ದಿನ 693 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 532 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ 867,020 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 867,020 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 22,762 ಮಂದಿ ಮೃತಪಟ್ಟಿದ್ದಾರೆ. 541,227 ಮಂದಿ ರೋಗಮುಕ್ತರಾಗಿದ್ದಾರೆ. 303,031 ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಪಂಚಾದ್ಯಂತ ಈವರೆಗೆ 12,896,697 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 568,586  ಜನರು ಮೃತಪಟ್ಟಿದ್ದಾರೆ, 7,512,511 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.  view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ