ಬೆಂಗಳೂರು: SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಸೋಮವಾರದಿಂದ ರಾಜ್ಯದ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಪ್ರಾರಂಭವಾಗಲಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಜುಲೈ 14 ರಿಂದ 22 ವರೆಗೆ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಈ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳ ಮೌಲ್ಯಮಾಪನ ಕಾರ್ಯ ನಾಳೆಯಿಂದ ನಡೆಯಲಿದೆ.
ಈ ಜಿಲ್ಲೆಗಳ ಮೌಲ್ಯಮಾಪನ ಕಾರ್ಯ ಮುಂದೂಡಿಕೆಯಾಗಿರುವುದರಿಂದ ಹೊಸ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.