ಬಾಗಲಕೋಟೆ: ಜಿಲ್ಲೆಯ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಾದ್ಯಂತ ಯಾವುದೇ ಪ್ರತಿಭಟನೆ ಮುಷ್ಕರ ಹಾಗೂ ಗುಂಪು ಸೇರುವಿಕೆಯನ್ನು ಇಂದಿನ ರಾತ್ರಿ (ನ.13) 8ಗಂಟೆಯಿಂದ ನ.16ರ ಬೆಳಗ್ಗೆ 8 ಗಂಟೆವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾದ ಸಂಗಪ್ಪ ಆದೇಶ ಹೊರಡಿಸಿದ್ದಾರೆ.

ಕಳೆದ ಇದೇ ನ.7 ರಿಂದ ಕಬ್ಬು ಬೆಳೆಗಾರ ರೈತರು ಕಬ್ಬಿನ ಬೆಲೆ ನಿಗದಿ ಮತ್ತು ಇತರೆ ಬೇಡಿಕೆಗಳ ಮುಂದಿಟ್ಟುಕೊಂಡು ಜಿಲ್ಲೆಯದ್ಯಂತ ರಸ್ತಾ ರೋಖೋ ಪ್ರತಿಭಟನೆ ಕೈಕೊಂಡಿದ್ದಾರೆ. ಈ ನಡುವೆ ಇಂದು ಮಹಾಲಿಂಗಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಗೋದಾವರಿ (ಸಮೀರವಾಡಿ) ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುತ್ತಿದ್ದಾರೆ.
ಮುಂದುವರೆದು ಇಂದು ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಗೋದಾವರಿ (ಸಮೀರವಾಡಿ) ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಟ್ರ್ಯಾಕ್ಟರಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡುತ್ತಿದ್ದು ಇನ್ನೂ ಹೆಚ್ಚಿನ ಹಾನಿ ಮಾಡುವ ಸಂಭವ ಇದೆ.
ಹೀಗಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ, ನಾಗರಿಕರ ಸುರಕ್ಷತೆ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳ ಸುರಕ್ಷತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಾದ್ಯಂತ ಯಾವುದೇ ಪ್ರತಿಭಟನೆ, ಮುಷ್ಕರ ಹಾಗೂ ಗುಂಪು ಸೇರುವಿಕೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

Related










