ಬೆಂಗಳೂರು: ಪರಿಸರ ಪ್ರೇಮಿ, ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ (114) ಇಂದು ಮಧ್ಯಾಹ್ನ ವಯೋಸಹಜವಾಗಿನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ನೂರ ಹದಿನಾಲ್ಕು ವರ್ಷದ ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ಕೊನೆಯುಸಿರೆಳೆದಿದ್ದಾರೆ.
ತಿಮ್ಮಕ್ಕೆ ಅವರ ಜೀವನ: ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ್ದರು. ತಂದೆ ಚಿಕ್ಕರಂಗಯ್ಯ, ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದ್ದರು. ಇವರು ಚಿಕ್ಕಯ್ಯ ಎಂಬುವ ದನಕಾಯುತ್ತಿದ್ದವರನ್ನು ಮದುವೆಯಾಗಿದ್ದರು. ಪತಿ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಆದರೆ ಒಬ್ಬರನ್ನು ದತ್ತು ತೆಗೆದುಕೊಂಡಿದ್ದು ಆತ ಇವರ ಯೋಗಕ್ಷೇಮವನ್ನು ನೋಡಿಕೊಳ್ಳುತ್ತಿದ್ದರು.
ಇನ್ನು ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು. ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ 94ರಲ್ಲಿ ತಿಮ್ಮಕ್ಕ ಅವರು ಬೆಳೆಸಿದ ಆಲದ ಮರಗಳು, ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದಾವೆ.
ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿ ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ 4 ಕಿ.ಮೀ. ಉದ್ದಳತೆಯ ದೂರ ನೆಟ್ಟರು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ 20 ಸಸಿಗಳನ್ನು ನೆಟ್ಟರು. ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು. ಈ ಗಂಡ-ಹೆಂಡಿತಿ ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಳಲ್ಲಿ ನೀರನ್ನು ನಾಲ್ಕು ಕಿಮೀ ದೂರದಿಂದ ತರುತ್ತಿದ್ದರು. ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಸಸಿಗಳು ಬೆಳೆಯಲು ನೀರಿನ ಅವಶ್ಯಕತೆಯಿರುವುದರಿಂದ, ಅವುಗಳನ್ನು ಹೆಚ್ಚಾಗಿ ಮುಂಗಾರು ಮಳೆಯ ಕಾಲದಲ್ಲಿ ನೆಡುತ್ತಿದ್ದರು.
ತಿಮ್ಮಕ್ಕನವರ ಸಾಧನೆಯ ಫಲಕ: ಮುಂದಿನ ಮುಂಗಾರಿನಷ್ಟು ಹೊತ್ತಿಗೆ ಈ ಎಲ್ಲ ಸಸಿಗಳು ಚೆನ್ನಾಗಿ ಬೇರು ಬಿಟ್ಟಿದ್ದವು. ಒಟ್ಟಾರೆ 284 ಸಸಿಗಳನ್ನು ನೆಟ್ಟರು. ಇಂದಿಗೆ ಅವುಗಳ ಮೌಲ್ಯವು ಸುಮಾರು 25 ಲಕ್ಷ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ. ಈ ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ.
ತಿಮ್ಮಕ್ಕಗೆ ಸಂದ ಪ್ರಶಸ್ತಿ, ಗೌರವ: ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಅನೇಕ ಸನ್ಮಾನಗಳು ಮತ್ತು ಪ್ರಶಸ್ತಿಗಳು ಸಂದಿವೆ: ರಾಷ್ಟ್ರೀಯ ಪೌರ ಪ್ರಶಸ್ತಿ – 1995. ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ, ವೀರಚಕ್ರ ಪ್ರಶಸ್ತಿ ಪ್ರಶಸ್ತಿ – 1997. ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ. ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು – ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.
ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ -2000, ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ 2006. ಪಂಪಾಪತಿ ಪರಿಸರ ಪ್ರಶಸ್ತಿ, ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ, ವನಮಾತೆ ಪ್ರಶಸ್ತಿ, ಮಾಗಡಿ ವ್ಯಕ್ತಿ ಪ್ರಶಸ್ತಿ, ಶ್ರೀಮಾತಾ ಪ್ರಶಸ್ತಿ, ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ, ಕರ್ನಾಟಕ ಪರಿಸರ ಪ್ರಶಸ್ತಿ, ಮಹಿಳಾರತ್ನ ಪ್ರಶಸ್ತಿ, ನ್ಯಾಷನಲ್ ಸಿಟಿಜನ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಹೂವಿನಹೊಳೆ ಪ್ರತಿಷ್ಠಾನ Archived 2021-05-18 ವೇಬ್ಯಾಕ್ ಮೆಷಿನ್ ನಲ್ಲಿದ ವಿಶ್ವಾತ್ಮ ಪುರಸ್ಕಾರ 2015.
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ. 2010ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಲಭಿಸಿದೆ. 2019ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿದೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಲಭಿಸಿದೆ.
ಭಾರತದಲ್ಲಿ ಹಲವಾರು ಕಾಡು ಬೆಳೆಸುವ ಕಾರ್ಯಕ್ರಮಗಳಿಗೆ ತಿಮ್ಮಕ್ಕ ಅವರನ್ನು ಆಹ್ವಾನಿಸಲಾಗುತ್ತಿತ್ತು. ತಮ್ಮ ಹಳ್ಳಿಯ ವಾರ್ಷಿಕ ಜಾತ್ರೆಗಾಗಿ ಮಳೆ ನೀರು ಶೇಖರಿಸಲು ದೊಡ್ಡ ತೊಟ್ಟಿಯ ನಿರ್ಮಾಣವೂ ಸೇರಿದಂತೆ ಇವರು ಇತರೆ ಸಮಾಜ ಸೇವೆಯ ತೊಡಗಿದ್ದರು. ತಮ್ಮ ಹಳ್ಳಿಯಲ್ಲಿ ಒಂದು ಆಸ್ಪತ್ರೆಯನ್ನು ಕಟ್ಟುವ ಆಸೆಯನ್ನಿಟ್ಟುಕೊಂಡಿದ್ದರು. ಅದಕ್ಕಾಗಿ ಒಂದು ನ್ಯಾಸ ನಿಧಿಯನ್ನು ನಿಯೋಜಿಸಿದ್ದಾರೆ.
Related










