NEWSರಾಜಕೀಯ

ಕೊರೊನಾ ಸೋಂಕಿತರಿಗೆ ವಿಟಮಿನ್‌ ಸಿ ಔಷಧ ವಿತರಿಸಿ: ಸಿಎಂಗೆ ಮಾಜಿ ಸಿಎಂ ಎಚ್‌ಡಿಕೆ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವ್ಯಾಪಕ‌ ಹೆಚ್ಚಳ ಹಿನ್ನೆಲೆಯಲ್ಲಿ ವಿಟಮಿನ್ ಸಿ ಔಷಧ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ (Immunity Booster) ಮತ್ತು ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ಸರ್ಕಾರ ಒದಗಿಸಲಿ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಈ ಆರೋಗ್ಯ ಕಿಟ್ ಗಳು ಪ್ರತಿ ಮೆಡಿಕಲ್ ಹಾಗೂ ಇತರ ಅಂಗಡಿಗಳಲ್ಲಿ ಮಾರಾಟಕ್ಕೂ ದೊರೆಯಲಿ. ಇದಲ್ಲದೆ ರೋಗ ಲಕ್ಷಣ ಕಂಡು ಬಂದವರಿಗೂ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಔಷಧಗಳನ್ನು ಪೂರೈಸಬೇಕು. ಆಗ ಮಾತ್ರ ಕರ್ನಾಟಕ ಕೊರೊನಾ ನಿಯಂತ್ರಣ ಮಾಡಲು ಸಾಧ್ಯ ಎಂದು ತಿಳಿಸಿದ್ದಾರೆ.

ಎಲ್ಲರಿಗೂ ಆರೋಗ್ಯ ಕಿಟ್ ನೀಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಕನಿಷ್ಠ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಆರೋಗ್ಯ ಕಿಟ್ ನೀಡಲು ಸರ್ಕಾರ ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಇದರ ಜತೆಗೆ ಕೇಂದ್ರ ಸರ್ಕಾರ ಈ ಸೋಂಕು ತಡೆಗೆ ಬಳಸಬಹುದಾದ ಯೋಗ್ಯ ಔಷಧಗಳ (supplements) ಪಟ್ಟಿ ಒದಗಿಸಿ ಅದನ್ನು ಸಾರ್ವಜನಿಕರು ವ್ಯಾಪಕವಾಗಿ ಬಳಸುವಂತೆ ಸಾಮೂಹಿಕ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ತಿಳಿಸಿದರು.

ಸರ್ಕಾರ ದಿನಕೊಂದು ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೊರೊನಾ ವೈರಸ್ ತಡೆಯುವಲ್ಲಿ ಎಡವುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇನ್ನಾದರೂ ಜವಾಬ್ದಾರಿಯಿಂದ, ದೂರದೃಷ್ಟಿಯಿಂದ ಸರ್ಕಾರ ಕಾರ್ಯ ಸಾಧುವಾದ ಯೋಜನೆಗಳನ್ನು ಜಾರಿಗೊಳಿಸಲು ತಕ್ಷಣ ಕಾರ್ಯೋನ್ಮುಖವಾಗಬೇಕು ಎಂದು ಆಗ್ರಹಿಸಿದ್ದಾರೆ

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...