KSRTC: ನಿಯಂತ್ರಣ ತಪ್ಪಿ ಮರಕ್ಕೆ ಬಸ್ ಡಿಕ್ಕಿ – ಚಾಲಕನ ಎರಡೂ ಕಾಲುಗಳ ಮೂಳೆ ಮುರಿತ,10ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಹೊಡೆದ ಪರಿಣಾಮ ಚಾಲಕನ ಎರಡು ಕಾಲುಗಳು ಮುರಿದಿರುವ ಘಟನೆ ಅರಸೀಕೆರೆಯ ಗೀಜಿಹಳ್ಳಿ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಬಸ್ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಚಾಲಕ ಸೇರಿ ಐವರ ಸ್ಥಿತಿ ಗಂಭಿರವಾಗಿದೆ. ಪುತ್ತೂರು ವಿಭಾಗದ ಮಡಿಕೇರಿ ಘಟಕದ ಬಸ್ ಅರಸೀಕೆರೆಯಿಂದ ಹಾಸನ್ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‍ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜುಗಿದ್ದು, ಚಾಲಕನ ಕಾಲು ಬಸ್‌ಗೆ ಸಿಲುಕಿಕೊಂಡಿದ್ದವು. ಈ ವೇಳೆ ಆ ಕಾಲುಗಳನ್ನು ಸುರಕ್ಷಿತವಾಗಿ ಹೊರತೆಗೆಯಲು ಅಲ್ಲಿದ್ದ ಜನರು ಭಾರಿ ಶ್ರಮಪಟ್ಟರು.
ಇನ್ನು ಚಾಲಕ ಸೇರಿದಂತೆ ಎಲ್ಲ ಗಾಯಾಳುಗಳಿಗೆ ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇತ್ತ ಸುದ್ದಿ ತಿಳಿದು ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.
ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜೆಸಿಬಿ ಬಳಸಿ ಬಸ್‍ನ್ನು ತೆರವುಗೊಳಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಘಟನೆ ಸಂಬಂಧ ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related









