NEWSನಮ್ಮರಾಜ್ಯ

ಕೊರೊನಾಗೆ ಬಿಬಿಎಂಪಿ ಅಧಿಕಾರಿ ನಟರಾಜ್‌ ಮೊದಲ ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿಗೆ ಬಿಬಿಎಂಪಿಯ ಯಲಹಂಕ ವಲಯದ ಯಲಹಂಕ ಹಳೇ ಪಟ್ಟಣ ಉಪವಿಭಾಗದ ಕಂದಾಯ ಮೌಲ್ಯಮಾಪಕರು ಬಲಿಯಾಗಿದ್ದಾರೆ.

ಮೌಲ್ಯಮಾಪಕರಾದ ನಟರಾಜ್‌ (58) ಮೃತ ಅಧಿಕಾರಿ. ಮಂಗಳವಾರ ಮೃತ ಮೃತಪಟ್ಟಿದ್ದು, ಈ ಮೂಲಕ ಬಿಬಿಎಂಪಿಯ ಮೊದಲ ಅಧಿಕಾರಿ ಕೊರೊನಾಗೆ ಬಲಿಯಾಗಿದ್ದಾರೆ.

ಕೊರೊನಾ ಲಕ್ಷಣಗಳು ಕಂಡು ಬಂದಿದ್ದರಿಂದ ಜೂನ್ 27ರಂದು ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೂಲತಃ ಬೆಂಗಳೂರಿನವರೇ ಆದ ನಟರಾಜ್ ನಾಗೇನಹಳ್ಳಿ ನಾರಾಯಣಪುರದ ನಿವಾಸಿ.

ಬಿಬಿಎಂಪಿಯಲ್ಲಿ ಸುಮಾರು 25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.  ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ. ನಟರಾಜ್ ಅವರ ಪುತ್ರಿ ವೈದ್ಯರಾಗಿದ್ದು ಮೊದಲು ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರ ತಾಯಿಗೂ ಸೋಂಕು ಹರಡಿತ್ತು. ಪುತ್ರಿ ಹಾಗೂ ಪತ್ನಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೊರೊನಾಗೆ ಬಲಿಯಾಗಿರುವ ನಟರಾಜ್ ಅವರ ಕುಟುಂಬಕ್ಕೆ ಕೋವಿಡ್‌ ವಿಮೆ ಮೊತ್ತವಾದ 30 ಲಕ್ಷ ರೂಪಾಯಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಘವು ಪತ್ರ ಬರೆದಿರುವುದಾಗಿ   ತಿಳಿಸಿದ್ದಾರೆ.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ