NEWSನಮ್ಮಜಿಲ್ಲೆನಮ್ಮರಾಜ್ಯ

ಕೊರೊನಾ ನಿಯಂತ್ರಣಕ್ಕಾಗಿ ಇಂದಿನಿಂದ ಧಾರವಾಡ ಜಿಲ್ಲೆಸ್ತಬ್ಧ

ಜಿಲ್ಲೆಯಲ್ಲಿ ಹೊರಗಡೆಯವರು ತಂಗಲು ಅವಕಾಶವಿಲ್ಲl  ಜಿಲ್ಲಾಧಿಕಾರಿ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಜುಲೈ 15 ರ ಬೆಳಗ್ಗೆ 10 ಗಂಟೆಯಿಂದ ಜುಲೈ 24 ರವರೆಗೆ ಲಾಕ್‍ಡೌನ್ ಜಾರಿ

ಧಾರವಾಡ: ಕೋವಿಡ್ ನಿಯಂತ್ರಣಕ್ಕಾಗಿ ಧಾರವಾಡ ಜಿಲ್ಲೆಯಲ್ಲಿ ಜುಲೈ 15 ರ ಬೆಳಗ್ಗೆ 10 ಗಂಟೆಯಿಂದ ಜುಲೈ 24 ರವರೆಗೆ ಲಾಕ್‍ಡೌನ್ ಜಾರಿಗೊಳಿಸಿರುವುದರಿಂದ ಈ ಅವಧಿಯಲ್ಲಿ ಸರಕು ಸಾಗಣೆ ಹೊರತುಪಡಿಸಿ, ಯಾವುದೇ ಸಾರಿಗೆ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ ಕೆ.ಪಾಟೀಲ ತಿಳಿಸಿದ್ದಾರೆ.

ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಲಾಕ್‍ಡೌನ್ ಜಿಲ್ಲೆಗೆ ಮಾತ್ರ ಸೀಮಿತವಾಗಿರುವುದರಿಂದ ಸಾರಿಗೆ ವಾಹನಗಳ ಸಂಚಾರದ ಬಗ್ಗೆ ವಿಶೇಷ ಗಮನ ನೀಡಬೇಕಾಗಿದೆ ಎಂದು ಹೇಳಿದರು.

ಜಿಲ್ಲೆಯ ಮಾರ್ಗವಾಗಿ ಅನ್ಯಜಿಲ್ಲೆಗಳು ಮತ್ತು ಸ್ಥಳಗಳಿಗೆ ತೆರಳುವ ಸಾರಿಗೆ ಸಂಸ್ಥೆ ಬಸ್‌ಗಳು ಮತ್ತು ಇತರ ವಾಹನಗಳು ಧಾರವಾಡ ಜಿಲ್ಲೆಗೆ ಪ್ರಯಾಣಿಕರನ್ನು ಕರೆತರಬಾರದು. ಜಿಲ್ಲೆಯ ಯಾವುದೇ ಸ್ಥಳದಲ್ಲಿ ಅಂತಹ ವಾಹನಗಳ ನಿಲುಗಡೆ ಮತ್ತು ಪ್ರಯಾಣಿಕರನ್ನು ಇಳಿಸಲು ಅವಕಾಶವಿಲ್ಲ ಎಂದು ತಿಳಿಸಿದರು.

ಧಾರವಾಡ ಜಿಲ್ಲೆಯ ಮಾರ್ಗವಾಗಿ ಬೇರೆ ಜಿಲ್ಲೆಗಳಿಗೆ ತೆರಳುವ ಸಾರಿಗೆ ವಾಹನಗಳು ಜಿಲ್ಲೆಯ ಯಾವುದೇ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಿಲುಗಡೆ ಮಾಡಬಾರದು. ಬೈಪಾಸ್ ರಸ್ತೆಗಳ ಮೂಲಕ ಸಂಚರಿಸಬಹುದು ಎಂದರು.

ಜಿಲ್ಲೆಗೆ ಪ್ರಯಾಣಿಕರನ್ನು ಕರೆತರಲು ಅವಕಾಶವಿಲ್ಲ. ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ನಿಗಮಗಳು, ವಿಭಾಗಗಳಿಗೆ ನೆರೆಯ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಹುಬ್ಬಳ್ಳಿ ಧಾರವಾಡ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಅಪ್ಪಯ್ಯ ನಾಲತ್ವಾಡಮಠ ಹಾಗೂ ಸಿ.ಡಿ. ನಾಯಕ್ ಇದ್ದರು.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್