ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ಸೊಂದು 2 ವರ್ಷದ ಹೆಣ್ಣು ಮಗುವಿನ ಮೇಲೆ ಹರಿದ ಪರಿಣಾಮ ಆ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮದ್ಯಾಹ್ನ 11:40ರ ಸುಮಾರಿಗೆ ಜರುಗಿದೆ.

ಪರಸಪ್ಪ ತಂದೆ ದ್ಯಾವಪ್ಪ ಹುಣಸ್ಯಾಳ ಎಂಬುವರ 2 ವರ್ಷದ ಮಗು ಲಕ್ಷ್ಮಿ ಅಪಘಾತದಲ್ಲಿ ಮೃತಪಟ್ಟ ಬಾಲಕಿ.
ಕೂಡಲಗಿ ಗ್ರಾಮದಿಂದ ಸುರಪುರಕ್ಕೆ ಹೊರಟಿರುವ KA 33 F 0346 ಬಸ್ ನ ಎರಡು ಚಕ್ರಗಳು ಮಗುವಿನ ಮೇಲೆ ಹರಿದಿದ್ದು ದೇಹ ಛಿದ್ರ ಛಿದ್ರಗೊಂಡಿದೆ.
ಮಗುವಿನ ಮೇಲೆ ಬಸ್ ಹರಿದು ಮೃತಪಟ್ಟಿದ್ದರಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ದುಃಖದ ಮಡುವುಕಟ್ಟಿತ್ತು.
ವಿಷಯ ತಿಳಿದು ಸ್ಥಳಕ್ಕೆ ಬಂದ ಕೆಂಭಾವಿ ಪೊಲೀಸ್ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಈ ಅಪಘಾತ ಪ್ರಕರಣ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related


Megha








