ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ರಾಜ್ಯ ಮಟ್ಟದ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ದಿನಾಂಕವನ್ನು ವಿಸ್ತರಿಸಿದೆ.
ಈ ಹಿಂದೆ ಜುಲೈ 20 ರ ಒಳಗಾಗಿ ಆಸಕ್ತ ರೈತರು ಅರ್ಜಿಯನ್ನು ಸಲ್ಲಿಸುವಂತೆ ಕೋರಲಾಗಿತ್ತು. ಬೆಂಗಳೂರು ನಗರ ಲಾಕ್‍ಡೌನ್ ಆಗುವುದರಿಂದ ಅರ್ಜಿ ಸಲ್ಲಿಸಲು ಕೃಷಿಕರಿಗೆ ತೊಂದರೆಯಾಗುವುದರಿಂದ ಭರ್ತಿಮಾಡಿದ ಅರ್ಜಿಯನ್ನು ಸಲ್ಲಿಸುವ ಕೊನೆ ದಿನಾಂಕವನ್ನು 30-07-2020 ರವರೆಗೆ ವಿಸ್ತರಿಸಲಾಗಿದೆ.
ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಅಕ್ಟೋಬರ್-2020ರಲ್ಲಿ ಆಯೋಜಿಸಲಿರುವ ಕೃಷಿಮೇಳ-2020ರ ಸಂದರ್ಭದಲ್ಲಿ ನೀಡಲಿದೆ.
ಅರ್ಜಿ ನಮೂನೆಯನ್ನು ಕೃಷಿ ವಿಶ್ವವಿದ್ಯಾಲಯದ ವೆಬ್ ಸೈಟ್ www.uasbangalore.edu.in ನಿಂದ ಪಡೆಯಬಹುದಾಗಿದೆ.
ಪ್ರಶಸ್ತಿಗಳ ವಿವರ, ಅರ್ಜಿಸಲ್ಲಿಸಲು ಅರ್ಹತೆ
1 ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ರೈತ / ರೈತ ಮಹಿಳೆಯರು
2 ಡಾ. ಎಂ.ಎಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ
3 ಸಿ. ಬೆೈರೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ
4 ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೊಳಪಡುವ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಹಾಸನ
5 ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ
6 ಜಿಲ್ಲಾ ಮಟ್ಟದ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿಗಳು
7 ತಾಲೂಕು ಮಟ್ಟದ ಯುವ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿಗಳು
8 ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ
ರಾಜ್ಯ ಅಭಿವೃದ್ಧಿ ಇಲಾಖೆಗಳ ವಿಸ್ತರಣಾ ಕಾರ್ಯಕರ್ತರು ವಿಸ್ತರಣಾ ನಿರ್ದೇಶನಾಲಯದ ಘಟಕಗಳು / ಕೃಷಿ ವಿಜ್ಞಾನ ಕೇಂದ್ರಗಳು / ವಿಸ್ತರಣಾ ಶಿಕ್ಷಣ ಘಟಕಗಳು ಅಥವಾ ಕೃಷಿ ವಿಶ್ವವಿದ್ಯಾಲಯ, ಬೆಂಗಳೂರಿನ ವಿಸ್ತರಣೆಯಲ್ಲಿ ನಿರಂತರವಾಗಿ ಕನಿಷ್ಠ 5 ವರ್ಷ ಕಾರ್ಯನಿರ್ವಹಿಸಿದ ವಿಜ್ಞಾನಿಗಳು / ವಿಸ್ತರಣಾ ಕಾರ್ಯಕರ್ತರು.