NEWSನಮ್ಮರಾಜ್ಯರಾಜಕೀಯ

ವಿಮಾನ, ರೈಲ್ವೆ ಪ್ರಯಾಣ ಮುಕ್ತ: ಲಾಕ್ ಡೌನ್ ನಿರ್ಬಂಧ ಕಷ್ಟಸಾಧ್ಯವೆಂದ ಆಯುಕ್ತ ಭಾಸ್ಕರ್‌ ರಾವ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಪ್ರಯಾಣಕ್ಕೆ ಮುಕ್ತವಾಗಿರುವ ಸಂದರ್ಭದಲ್ಲಿ ಲಾಕ್ ಡೌನ್ ನಿರ್ಬಂಧ ನಿರ್ವಹಿಸುವುದು ಸವಾಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಭಾಸ್ಕರ್ ರಾವ್ ತಿಳಿಸಿದ್ದಾರೆ.

ನಗರದಲ್ಲಿ ಒಂದು ವಾರ ಲಾಕ್ ಡೌನ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಕಬ್ಬನ್ ಪಾರ್ಕ್ ಸುತ್ತಮುತ್ತ ಪ್ರದೇಶಗಳಲ್ಲಿ ಲಾಕ್ ಡೌನ್ ಹೇಗೆ ಜಾರಿಗೆ ಬಂದಿದೆ ಎಂದು ಪರಿಶೀಲಿಸಿ, ಕಬ್ಬನ್ ಪಾರ್ಕ್ ಬಳಿ ಬಸ್ ನಿಲ್ಧಾಣದಲ್ಲಿ ಜನರನ್ನು   ಎಲ್ಲಿಗೆ ಹೋಗುತ್ತಿರುವಿರಿ ಎಂದು ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರು.

ಲಾಕ್ ಡೌನ್ ಏಕೆ ಜಾರಿಗಿದೆ ಎಂದು ಜನರು ಪರಿಸ್ಥಿತಿ ಅರ್ಥ ಮಾಡಿಕೊಂಡು ಜವಾಬ್ದಾರಿಯಿಂದ ವರ್ತಿಸಬೇಕು. ಜನರಿಗೆ ಅಗತ್ಯ ವಸ್ತುಗಳು, ಸೇವೆಗಳನ್ನು ಪಡೆಯಲು ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶವಿದೆ. ಅನಗತ್ಯವಾಗಿ ಬೀದಿಗಳಲ್ಲಿ ಓಡಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನು ಸಂಚಾರ ಪೊಲೀಸ್ ಸಿಬ್ಬಂದಿ ರಾತ್ರಿ 8 ಗಂಟೆಯಿಂದ ಬೆಳಗ್ಗೆ 8 ಗಂಟೆಯವರೆಗೆ ಇರುತ್ತಾರೆ. ನಗರದಲ್ಲಿ ಪ್ರಯಾಣಿಕರ ಸಂಚಾರ, ಅಲ್ಲಲ್ಲಿ ಬ್ಯಾರಿಕೇಡ್ ಹಾಕುವ ಬಗ್ಗೆ ಟ್ರಾಫಿಕ್ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ವಿವರಿಸಿದರು.

ರೈತರು ತರಕಾರಿ, ಹಣ್ಣು ಬೆಳೆಗಳನ್ನು ನಗರದೊಳಗೆ ತಂದು ಮುಕ್ತವಾಗಿ ಮಾರಾಟ ಮಾಡಲು ಸರ್ಕಾರ ವ್ಯವಸ್ಥೆ ಮಾಡಿದೆ, ಇದರಲ್ಲಿ ಯಾವುದೇ ಸಮಸ್ಯೆಯಿಲ್ಲ, ಬೆಳೆಗಾರರಿಗೆ ನಾವು ತೊಂದರೆ ಕೊಡುವುದಿಲ್ಲ ಎಂದು ಹೇಳಿದರು.

ಪೊಲೀಸರು ಜನರ ಓಡಾಟದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಅನಗತ್ಯವಾಗಿ ಸಂಚರಿಸುತ್ತಿದ್ದ 60ಕ್ಕೂ ಹೆಚ್ಚುವಾಹನಗಳನ್ನು ಈಗಾಗಲೇ ವಶಕ್ಕೆ ಪಡೆದಿದ್ದು, ಇನ್ನು ಕಠೀಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದಾರೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?