CRIMENEWSನಮ್ಮಜಿಲ್ಲೆ

NWKRTC: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – ಸಿಬ್ಬಂದಿ ಸೇರಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಕಾರವಾರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದು, ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಗೇರುಸೊಪ್ಪಾದ ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದೆ.

ಇಂದು ಬೆಳಗಿನ ಜಾವ ಸುಮಾರು 2 ಗಂಟೆಯಲ್ಲಿ ಈ ದುರ್ಘಟನೆ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಸಂಭವಿಸಿದೆ. ಹಾನಗಲ್‌ನಿಂದ ಹೊರಟಿದ್ದ NWKRTC ಬಸ್‌ ಸಿದ್ದಾಪುರ ಮಾರ್ಗವಾಗಿ ಹೊನ್ನಾವರದ ಕಡೆಗೆ ಬರುತ್ತಿತ್ತು.

ಈ ವೇಳೆ ಘಟ್ಟ ಪ್ರದೇಶದ ಇಳಿಜಾರಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆಯ ಎಡಬದಿಯ ತಗ್ಗು ಪ್ರದೇಶಕ್ಕೆ ಬಿದ್ದಿದೆ.

ಪರಿಣಾಮ ಅಪಘಾತದಲ್ಲಿ ಬಸ್ ಚಾಲಕ, ನಿರ್ವಾಹಕ ಸೇರಿದಂತೆ ಬಸ್ಸಿನಲ್ಲಿದ್ದ ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಎಲ್ಲ ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತ ಬಸ್ ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಆರೋಪದಡಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Megha
the authorMegha

Leave a Reply

error: Content is protected !!