4 ಸಾರಿಗೆ ಸಂಸ್ಥೆಗಳಿಗೆ ನವೆಂಬರ್ ತಿಂಗಳ ಉಚಿತ ಟಿಕೆಟ್ಗೆ ಮುಂಗಡವಾಗಿ 441.66 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ಶಕ್ತಿ ಯೋಜನೆಯಡಿ ನವೆಂಬರ್-2025ರ ಮಾಹೆಯಲ್ಲಿ ರಾಜ್ಯದ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ವಿತರಿಸಲಾಗುವ ಶೂನ್ಯ ಟಿಕೇಟ್ಗಳ ವೆಚ್ಚಕ್ಕೆ ಮುಂಗಡವಾಗಿ 441 ಕೋಟಿ 66 ಲಕ್ಷದ 66 ಸಾವಿರ ರೂಪಾಯಿಗಳನ್ನು ಬಿಡುಗಡೆಗೊಳಿಸಿ ಸರ್ಕಾರ ಸೋಮವಾರ ಆದೇಶಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಿಗೆ ನವೆಂಬರ್ ತಿಂಗಳ ಉಚಿತ ಟಿಕೆಟ್ ಹಣ 441 ಕೋಟಿ 66 ಲಕ್ಷದ 66 ಸಾವಿರ ರೂಪಾಯಿಗಳನ್ನು ಮುಂಗಡವಾಗಿ ಬಿಡುಗಡೆಗೊಳಿಸಿದೆ.
ಇನ್ನು ಸರ್ಕಾರದ ಆದೇಶದಲ್ಲಿ ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ (Express) ಬಸ್ಸುಗಳಲ್ಲಿ ರಾಜ್ಯದ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಲಿದ್ದಾರೆ.
ಹೀಗಾಗಿ 17.11.2025ರಂದು ರಾಜ್ಯದ 4 ಸಾರಿಗೆ ಸಂಸ್ಥೆಗಳಿಗೆ ಶಕ್ತಿ ಯೋಜನೆಯಡಿ ನವೆಂಬರ್-2025ರ ಮಾಹೆಯಲ್ಲಿ ರಾಜ್ಯದ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ವಿತರಿಸಲಾಗುವ ಶೂನ್ಯ ಟಿಕೇಟ್ಗಳ ವೆಚ್ಚಕ್ಕೆ ಮುಂಗಡವಾಗಿ 441 ಕೋಟಿ 66 ಲಕ್ಷದ 66 ಸಾವಿರ ರೂ.ಗಳನ್ನು ಷರತ್ತುಗಳಿಗೊಳಪಟ್ಟು ಶೇಕಡವಾರು ಅನುಪಾತದನ್ವಯ ನಿಗಮವಾರು ಬಿಡುಗಡೆಗೊಳಿಸಿ ಆದೇಶಿಸಿದೆ.
ಅದರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 171 ಕೋಟಿ 41 ಲಕ್ಷದ 8 ಸಾವಿರ ರೂ., ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 75 ಕೋಟಿ 65 ಲಕ್ಷದ 75 ಸಾವಿರ ರೂ.ಗಳು ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 107 ಕೋಟಿ 67ಲಕ್ಷದ 83 ಸಾವಿರ ರೂ.ಗಳನ್ನು ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 86 ಕೋಟಿ 92ಲಕ್ಷ ರೂ.ಗಳನ್ನು ಅಂದರೆ ಒಟ್ಟಾರೆ 441 ಕೋಟಿ 66 ಲಕ್ಷದ 66 ಸಾವಿರ ರೂ.ಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಇನ್ನು ಬಿಡುಗಡೆ ಮಾಡಿರುವ ಅನುದಾನವನ್ನು ನಾಲ್ಕೂ ಸಾರಿಗೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರು ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರಿಂದ ಪೇಯಿಸ್ ರಶೀದಿಗೆ ಮೇಲು ರುಜು ಪಡೆದು ರಾಜ್ಯ ಹುಜೂರು ಖಜಾನೆಯಿಂದ ಡ್ರಾ ಮಾಡಲು ಅನುಮತಿ ನೀಡಿದೆ ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ತಿಳಿಸಿದ್ದಾರೆ. ಶಕ್ತಿ ಯೋಜನೆಯ ಅನುದಾನ ಬಿಡುಗಡೆ ಆದೇಶ
Related









