ಬೆಂಗಳೂರು: ರಾಜ್ಯ ಸರ್ಕಾರ ಕೇಂದ್ರದ ರೀತಿ ಸಣ್ಣ,ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ MSME ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇವರೊಂದಿಗೆ ಸುಮಾರು 40 ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ ರಾಜ್ಯಸರ್ಕಾರ ತಡಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವಂತೆ ಟ್ವಿಟರ್ ಮೂಲಕ ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ MSME ಗಳಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ವಿನಾಯಿತಿ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಸುಮಾರು 6 ಲಕ್ಷಕ್ಕೂ ಹೆಚ್ಚುಮಂದಿ MSME ಉದ್ದಿಮೆದಾರರು ನೋದಾಯಿಸಿಕೊಂಡಿದ್ದು, ಇದರಲ್ಲಿ ಅರ್ಧಕ್ಕಿಂತ ಹೆಚ್ಚು ಬೆಂಗಳೂರಿನ ಉದ್ಯಮಿಗಳೆ ಆಗಿದ್ದಾರೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Super