NEWSನಮ್ಮರಾಜ್ಯರಾಜಕೀಯ

ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾಗಲು ಆಗುತ್ತಿರುವ ತೊಡಕು ನಿವಾರಣೆಗೆ ಕ್ರಮ: ಸಿಎಂ ಬಿಎಸ್‌ವೈ  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಹಾಗೂ ನಿರ್ವಹಣೆ ಕುರಿತು ಎಂಟು ವಲಯಗಳ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ, ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ತೊಡಕು ನಿವಾರಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ, ಕೋವಿಡ್ ಹಾಗೂ ನಾನ್ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ದೊರಕುವುದನ್ನು ಖಾತರಿ ಪಡಿಸಬೇಕು ಎಂದು   ಹೇಳಿದರು.

ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸದೆ, ಕೋವಿಡ್ ಕೇರ್ ಸೆಂಟರ್ ಗಳಿಗೆ ಅಥವಾ  ಹೋಮ್ ಕ್ವಾರಂಟೈನ್ ಮಾಡಲಾಗುವುದು.  ಆ ಮೂಲಕ ತೀವ್ರತರ ರೋಗ ಲಕ್ಷಣದಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು.

ಆಸ್ಪತ್ರೆಯಲ್ಲಿ   ಮೃತರಾದವರಿಗೆ ರಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿಸಲು ಅಥವಾ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸಬೇಕು. ಮನೆಯಲ್ಲಿ ಮೃತರಾದವರಿಗೂ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಡೆಸಿ ಮೃತದೇಹವನ್ನು ತುರ್ತಾಗಿ ಅಂತ್ಯಕ್ರಿಯೆ ನಡೆಸಲು ಕ್ರಮ ವಹಿಸುವುದು ಎಂದು ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ
ಲಾಕ್ ಡೌನ್ ಮುಂದುವರಿಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ವೈದ್ಯರ ಕೊರತೆ ನಿವಾರಿಸಲು, ಹುದ್ದೆ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ.  ಪ್ರತಿ ವಾರ್ಡಿನಲ್ಲೂ ಸ್ವಯಂ ಸೇವಕರನ್ನು ಗುರುತಿಸಲಾಗಿದೆ ಹಾಗೂ ಆಂಬುಲೆನ್ಸ್ ನಿಗದಿ ಪಡಿಸಲಾಗಿದೆ ಎಂದು ವಿವರಿಸಿದರು.

ಖಾಸಗಿ ಆಸ್ಪತ್ರೆಗಳು ಬೆಡ್ ನೀಡದೆ ಇದ್ದರೆ ಕಠಿಣ ಕ್ರಮ
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ದಾಖಲಾತಿ ಮತ್ತು ಹಾಸಿಗೆಗಳ ಲಭ್ಯತೆ ಕುರಿತು ಮಾಹಿತಿ ಒದಗಿಸಲು ಸ್ವಯಂ ಸೇವಕರು ಹಾಗೂ ನೋಡಲ್ ಅಧಿಕಾರಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್‌ವೈ ತಿಳಿಸಿದರು.

ಪ್ರತಿ ವಾರ್ಡ್‌ಗಳಲ್ಲಿ ಕಲ್ಯಾಣ ಮಂಟಪಗಳನ್ನು ಹಾಗೂ ವಸತಿ ಗೃಹಳನ್ನು ಗುರುತಿಸಲಾಗಿದ್ದು, ಪ್ರತ್ಯೇಕವಾಗಿ ವಾಸಿಸಲು ಕೊಠಡಿಗಳು ಇಲ್ಲದವರಿಗೆ ಕ್ವಾರಂಟೈನ್ ಮಾಡಲು ಈ ಕಲ್ಯಾಣ ಮಂಟಪಗಳನ್ನು ಬಳಸುವಂತೆ ಸೂಚಿಸಿದರು.

ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು ಸಿಎಂ ನಿರ್ದೇಶನ
ಜನ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವ ಸಾಧ್ಯತೆಗಳಿರುವ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸುವಂತೆ ತಿಳಿಸಿದರು.

ಪರೀಕ್ಷೆಯ ಫಲಿತಾಂಶ ದೊರೆತ ಎರಡು ಗಂಟೆಗಳೊಳಗೆ ಹಾಸಿಗೆ ಹಂಚಿಕೆ ಮಾಡಿ, ಅಂಬ್ಯುಲೆನ್ಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಕ್ರಮ ವಹಿಸಬೇಕು. ಈ ವ್ಯವಸ್ಥೆಯನ್ನು ವೀಕೇಂದ್ರೀಕರಿಸಿ, ವಲಯವಾರು, ಮೇಲ್ವಿಚಾರಣೆ ನಡೆಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.  ರೋಗ ಲಕ್ಷಣ ಇರುವ, 65 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಆದ್ಯತೆಯ ಮೇರೆಗೆ ಹಾಸಿಗೆ ಹಂಚಿಕೆ ಮಾಡಬೇಕು. ರೋಗಲಕ್ಷಣ ಇಲ್ಲದವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಬೇಕು ಎಂದು ಸೂಚಿಸಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ. ಸೋಮಣ್ಣ, ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ಬಿ. ಸದಾನಂದಗೌಡ, ಸಂಸದ ತೇಜಸ್ವಿ ಸೂರ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...