ಬೆಂಗಳೂರು: ಜನನ ಮತ್ತು ಮರಣ ಪ್ರಮಾಣ ಪತ್ರ ವಿತಣೆಯನ್ನು ಇನ್ನು ಮುಂದೆ ಪಿಡಿಒ ಅವರೇ ವಿತರಿಸಲು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜನನ ಮತ್ತು ಮರಣ ಪ್ರಮಾಣಪತ್ರ ವಿತರಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಮ ಪಂಚಾಯಿತಿಗಳು ಜನನ ಮತ್ತು ಮರಣಗಳನ್ನು ತ್ವರಿತ ನೋಂದಣಿ ಮಾಡಿ ಅದನ್ನು ವರದಿ ಮಾಡುವುದನ್ನು ಖಚಿತಪಡಿಸಿಕೊಳ್ಳುವ ಕರ್ತವ್ಯ ಹೊಂದಿವೆ. ಆದ್ದರಿಂದ ಪಂಚಾಯಿತಿ ಮಟ್ಟದಲ್ಲಿ ಪಿಡಿಒಗಳು ಇನ್ನು ಮುಂದೆ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಿಸಲಿದ್ದಾರೆ.
ಪಿಡಿಒಗಳು ಬಾಪೂಜಿ ಸೇವಾ ಕೇಂದ್ರಗಳ ಮುಖಾಂತರ ಈ ಸೇವೆಯನ್ನು ನೀಡಬೇಕು ನಿಗದಿಪಡಿಸಿರುವ ದರಗಳ ಅನ್ವಯ ಸೇವಾ ಶುಲ್ಕವನ್ನು ಸಂಗ್ರಹಿಸಿ ಸಂಬಂಧಿಸಿದ ಲೆಕ್ಕ ಶೀರ್ಷಿಕೆಗೆ ಜಮಾ ಮಾಡಬೇಕು ಎಂದು ಸರ್ಕಾರ ಸೂಚಿಸಿದೆ.