ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರಿಗೆ ಕೂಡಲೇ ಈ ತಿಂಗಳ ವೇತನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕೆಎಸ್ಆರ್ಟಿಸಿ ನೌಕರರಿಗೆ 18 ದಿನಕಳೆದರೂ ಸರ್ಕಾರ ಈ ತಿಂಗಳ ವೇತನವನ್ನು ಇನ್ನೂ ನೀಡಿಲ್ಲ. ಇದರಿಂದ ಒಂದುಕಾಲು ಲಕ್ಷ ನೌಕರರ ಕುಟುಂಬಗಳು ಕೊರೊನಾ ಹಾವಳಿ ಜತೆಯಲ್ಲಿ ಜೀವನ ನಿರ್ವಹಣೆಗಾಗಿಯೂ ಪರದಾಡುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನಿಂದ ಈಗಾಗಲೇ ಸಾರಿಗೆ ಸಿಬ್ಬಂದಿ ಸಾಕಷ್ಟು ಬಳಲಿದ್ದಾರೆ. ಹೀಗಾಗಿ ಈ ನೌಕರರಿಗೆ ತಕ್ಷಣ ಸಂಬಳ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.