Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯರಾಜಕೀಯ

ಕೊರೊನಾ ಸೋಂಕಿತರ ಮನೆಗೆ ಎಚ್ಚರಿಕೆ ಫಲಕ ಅಸ್ಪೃಶ್ಯತೆಗೆ ಕಾರಣ: ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ. ಕುಟುಂಬಗಳನ್ನು ಸಮಾಜ ತಿರಸ್ಕಾರದಿಂದ ನೋಡುವಂತೆ ಮಾಡುತ್ತಿದೆ. ಸೋಂಕಿನ ನಂತರವೂ ವ್ಯಕ್ತಿ,ಕುಟುಂಬ ಗೌರವಯುತವಾಗಿ ಬದುಕಬೇಕು. ಹಾಗಾಗಿ ಫಲಕ ಹಾಕುವ ಪರಿಪಾಠವನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು‌ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮನೆಗಳ ಎದುರು ಫಲಕ ಹಾಕಿ ಅಸ್ಪೃಶ್ಯತೆ ಸೃಷ್ಟಿಸುವ ಬದಲು ಆರೋಗ್ಯ ಕಾರ್ಯಕರ್ತರನ್ನು ಅವರ ಮನೆಗೆ ಕಳುಹಿಸಿ ಧೈರ್ಯ, ಜಾಗೃತಿ, ಅರಿವು ಮೂಡಿಸಬೇಕು‌. ಮನೆಯಿಂದ ಹೊರಬಾರದಂತೆ ಅವರ ಜವಾಬ್ದಾರಿ ತಿಳಿಸಿಕೊಡಬೇಕು. ಅದು ಬಿಟ್ಟು ಇಂಥ ಅಪಮಾನಿಸುವ ಪರಿಪಾಠ ಬೇಡ. ಈ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಗಮನ ಹರಿಸಲಿ ಎಂದು ಒತ್ತಾಯಿಸಿದ್ದಾರೆ.

ಯಾವುದೇ ಆಸ್ಪತ್ರೆಯ ಚಿಕಿತ್ಸೆ ನಿರಾಕರಿಸುವುದು ತಪ್ಪು. ಆದರೆ ಅದೇ ಕಾರಣಕ್ಕೆ ಸರ್ಕಾರ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಬೆದರಿಕೆ ಹಾಕುವುದು ಸರಿಯಲ್ಲ. ಆರೋಗ್ಯದ ಈ ತುರ್ತುಪರಿಸ್ಥಿತಿಯಲ್ಲಿ ಅದರಿಂದ ಲಾಭವೂ ಇಲ್ಲ. ಅಷ್ಟಕ್ಕೂ ಮೆಡಿಕಲ್ ಕಾಲೇಜುಗಳ ಲೈಸನ್ಸ್ ರದ್ದು ಮಾಡುವ ಅಧಿಕಾರ ಇರುವುದು MCIಗೆ. ಸರ್ಕಾರಕ್ಕಲ್ಲ ನೆನಪಿರಲಿ ಎಂದು ಎಚ್ಚರಿಸಿದರು.

ಈ ಪರಿಸ್ಥಿಯಲ್ಲಿ ಮೆಡಿಕಲ್ ಕಾಲೇಜುಗಳ ಮೇಲೆ ರೋಷಾವೇಶ ತೋರುವುದನ್ನು ಬಿಟ್ಟು ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಅವರ ಸೇವೆ ಪಡೆಯುವತ್ತ ಸರ್ಕಾರ ಗಮನಹರಿಸಲಿ‌. ಅವರ ಅಗತ್ಯಗಳನ್ನು ಪೂರೈಸುವತ್ತ ಗಮನ ಹರಿಸಲಿ. ಈ ಮೂಲಕ ಕೊರೊನಾ ವೈರಸ್ ವಿರುದ್ಧ ಸಾಂಘಿಕ ಹೋರಾಟ ನಡೆಸಲಿ ಎಂದು ಟ್ವಿಟರ್‌ ಮೂಲಕ ಒತ್ತಾಯಿಸಿದ್ದಾರೆ.

1 Comment

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ