NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನ.26ರಂದು ನಡೆಯುವ ಸಿಎಂ ಅಧ್ಯಕ್ಷತೆ ಸಭೆಯ ಬಗ್ಗೆ ಬಹುದೊಡ್ಡ ನಿರೀಕ್ಷೆಯಲ್ಲಿ ನಾಲ್ಕೂ ನಿಗಮಗಳ ನೌಕರರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಿಎಂ ಅಧ್ಯಕ್ಷತೆಯಲ್ಲಿ ನೌಕರರ ಸಂಘಟನೆಗಳ ಸಭೆಯನ್ನು ವಿಧಾನಸೌಧದಲ್ಲಿ ಕರೆಯಲಾಗಿದ್ದು, ನವೆಂಬರ್‌ 26ರಂದು ನಡೆಯವ ಸಭೆಯಲ್ಲಿ ನೌಕರರಿಗೆ ಒಳ್ಳೆದಾಗುವಂತಹ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನೌಕರರ ಮನವಿ ಮಾಡಿದ್ದಾರೆ.

ಬುಧವಾರ (ನ.19) ಸಭೆ ನಡೆಯುವ ಸಂಬಂಧ KSRTC ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಮಾಹಿತಿ ನೀಡಿ ಸಭೆ ನಡೆಯುವ ಸ್ಥಳದ ಬಗ್ಗೆ ತಿಳಿಸಿರಲಿಲ್ಲ ಹೀಗಾಗಿ ಗುರುವಾರ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಮೂರನೇ ಮಹಡಿಯ 313ನೇ ಕೊಠಡಿಯಲ್ಲಿ ಸರ್ಕಾರದ ನಿರ್ದೇಶನದಂತೆ ನಿಗದಿಪಡಿಸಿರುವ ಸಭೆಗೆ ಎಲ್ಲ ಸಂಘಟನೆಗಳ ತಲಾ ಇಬ್ಬರು ಪದಾಧಿಕಾರಿಗಳು ಹಾಜರಾಗಬೇಕು ಎಂದು ಮನವಿ ಮಾಡಿದ್ದಾರೆ.

ಈ ಸಭೆ ಅಂದು ಸಂಜೆ 4 ಗಂಟೆಗೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯೊಂದಿಗೂ ಹಾಗೂ ಮಧ್ಯಾಹ್ನ 4.30ಕ್ಕೆ ನೌಕರರ ಒಕ್ಕೂಟದೊಂದಿಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಹೀಗಾಗಿ ನ.26ರಂದು ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿಗಳು ಕೂಡ ನಮ್ಮ ಬಗ್ಗೆ ಕಾಳಜಿವಹಿಸಬೇಕು. ಅದರಂತೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಹಾಗೂ ನೌಕರರ ಒಕ್ಕೂಟದ ಪದಾಧಿಕಾರಿಗಳು ಕೂಡ ಅಳೆದುತೂಗಿ ನೌಕರರಿಗೆ ಒಳ್ಳೆಯದಾಗುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ವೇತನ ಹೆಚ್ಚಳವಾಗಿದ್ದು ಅದರ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಹೆಚ್ಚಳ ಮಾಡಬೇಕು. ಜತೆಗೆ ಇದರ ಹಿಂಬಾಕಿಯನ್ನು ಕೊಡಬೇಕು. ಆ ನಿಟ್ಟಿನಲ್ಲಿ ಸರ್ಕಾರವು ತೀರ್ಮಾನ ತೆಗೆದುಕೊಳ್ಳಬೇಕು ಮತ್ತು ಸಂಘಟನೆಗಳ ಪದಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ನ.26ರಂದು ನಡೆಯುವ ಸಭೆಯ ಬಗ್ಗೆ ನಾಲ್ಕೂ ನಿಗಮಗಳ ಸಮಸ್ತ ನೌಕರರು ಬಹುದೊಡ್ಡ ನಿರೀಕ್ಷೆಯನ್ನೇ ಇಟ್ಟುಕೊಂಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಸಂಘಟನೆಗಳು ದುಡಿಕಿನ ತೀರ್ಮಾನ ತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ