CrimeNEWSದೇಶ-ವಿದೇಶಶಿಕ್ಷಣ-

ಬಾಲಕಿಮೇಲೆ ಗ್ಯಾಂಗ್‌ ರೇಪ್‌, ಕೊಲೆ: ತೀವ್ರ ಪ್ರತಿಭಟನೆ ಹಲವು ವಾಹನಗಳಿಗೆ ಬೆಂಕಿ

ವಿಜಯಪಥ ಸಮಗ್ರ ಸುದ್ದಿ

ಕೋಲ್ಕತ: ಶಾಲಾ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿ ಕೊಲೆ ಮಾಡಿದ್ದ ಘಟನೆಗೆ ಸಂಬಂಧಿಸಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ ತೀವ್ರ ಪ್ರತಿಭಟನೆ ನಡೆಸಿದ್ದರಿಂದ  ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತದಿಂದ ಸಿಲಿಗುರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 31 ಭಾನುವಾರ ಅಕ್ಷರಶಃ ಯುದ್ಧಭೂಮಿಯಂತೆ ಮಾರ್ಪಟ್ಟಿತ್ತು.

ರಸ್ತೆಯಲ್ಲಿ ಚಲಿಸುತ್ತಿದ್ದ ಅನೇಕ ವಾಹನಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಅತ್ಯಾಚಾರಿ, ಹತ್ಯೆಕೋರರ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.

ಕೋಲ್ಕತದಿಂದ 500 ಕಿಲೋ ಮೀಟರ್ ಉತ್ತರಕ್ಕೆ ಚೋಪ್ರಾ ಎಂಬ ಪ್ರದೇಶದಲ್ಲಿ ಈ ಪ್ರತಿಭಟನೆ ನಡೆದಿದೆ. ಸುಮಾರು 2 ಗಂಟೆಗಳು ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದರು. ಆದರೆ ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಪೊಲೀಸರು ಗುಂಪು ಚದುರಿಸಲು ಲಾಠಿಚಾರ್ಜ್, ಆಶ್ರುವಾಯು ಸಿಡಿಸಬೇಕಾಗಿ ಬಂತು.

ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆರಂಭವಾದ ಪ್ರತಿಭಟನೆ ಹಲವು ಗಂಟೆಗಳು ಮುಂದುವರಿದು ಮೂರು ಬಸ್‌ಗಳು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದರು.

ಪ್ರತಿಭಟನಾಕಾರರನ್ನು ಚದುರಿಸಲು ಸಂಜೆ 5 ಗಂಟೆವರೆಗೆ ಪೊಲೀಸರು ಹರಸಾಹಸ ಮಾಡಬೇಕಾಯಿತು. ಆದರೆ ಮತ್ತೊಂದು ರಸ್ತೆಯಲ್ಲಿ ಹೋದ ಪ್ರತಿಭಟನಾಕಾರರು ಅಲ್ಲಿ ತಮ್ಮ ಕೈಗೆ ಸಿಕ್ಕಿದ ಆಯುಧಗಳಿಂದ ಪೊಲೀಸರ ಮೇಲೆ ದಾಳಿ ಮಾಡಿದರು.

ಅತ್ಯಾಚಾರ ಎಸಗಿಲ್ಲ ಎಂದ ಪೊಲೀಸರು
ಈ ನಡುವೆ ಪ್ರತಿಭಟನಾಕಾರರು ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎನ್ನುತ್ತಿದ್ದರೆ ಪೊಲೀಸರು ಹೇಳುವುದೇ ಬೇರೆ, ಬಾಲಕಿಯ ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ದೇಹದಲ್ಲಿ ಹಲ್ಲೆ ಗುರುತುಗಳಾಗಲಿ, ಶಾರೀರಿಕವಾಗಿ ಹಿಂಸೆ ನೀಡಿ, ಲೈಂಗಿಕ ಕ್ರೌರ್ಯ ಮೆರೆದಿರುವಂಥ ಯಾವುದೇ  ಗುರುತುಗಳಿಲ್ಲ, ವಿಷ ದೇಹಕ್ಕೆ ಹೋದ ಪರಿಣಾಮ ಮೃತಪಟ್ಟಿದ್ದಾಳೆ ಎಂದು   ಹೇಳುತ್ತಿದ್ದಾರೆ.

ಈ ಬಗ್ಗೆ ಇಷ್ಟೊಂದು ಪ್ರತಿಭಟನೆ ನಡೆದರೂ ಕೂಡ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ. ಪರಿಸ್ಥಿತಿ ಸದ್ಯ ನಿಯಂತ್ರಣದಲ್ಲಿದ್ದು, ಬಾಲಕಿ ಸಾವಿನ ಬಗ್ಗೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...