Vijayapatha – ವಿಜಯಪಥ
Friday, November 1, 2024
NEWSಆರೋಗ್ಯನಮ್ಮರಾಜ್ಯ

ಚಾಮರಾಜನಗರದಲ್ಲಿ ಕೊರೊನಾ ಸೋಂಕಿತ  ಗರ್ಭಿಣಿಗೆ ಹೆರಿಗೆ: ತಾಯಿ ಮಗು ಕ್ಷೇಮ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ:  ನಗರದ ನಿಗದಿತ  ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತ ಮಹಿಳೆಯೊಬ್ಬರು ಭಾನುವಾರ ಸಂಜೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತಾಯಿ ಮಗು ಕ್ಷೇಮವಾಗಿದ್ದಾರೆ. ಹನೂರು ತಾಲೂಕಿನ ಗಾಣಿಗ ಮಂಗಲದ 21 ವರ್ಷದ ಮಹಿಳೆ ಹೆಣ್ಣು ಮಗುವಿಗೆ ಜನ್ಮವಿತ್ತವರು. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಮಹಿಳೆ ಜನ್ಮ ನೀಡಿದ ಮೊದಲ ಪ್ರಕರಣ ಇದಾಗಿದೆ.

ಈ ಮಹಿಳೆ ಕಳೆದ ಜುಲೈ 17 ರಂದು  ಹೆರಿಗೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.  ಮಾರ್ಗ ಅನುಸೂಚಿ ಪ್ರಕಾರ ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇಂದು ಬೆಳಿಗ್ಗೆ ಬಂದ ವರದಿಯಲ್ಲಿ ಕೋವಿಡ್ ಸೋಂಕು ಇರುವುದು ಧೃಢಪಟ್ಟಿತು.ಗರ್ಭಿಣಿಗೆ 41 ವಾರಗಳು   ತುಂಬಿದ್ದರಿಂದ ಆಕೆಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲು ಆಸ್ಪತ್ರೆ ವೈದ್ಯರು ನಿರ್ಧರಿಸಿದರು.

ಅದರಂತೆ ಸಂಜೆ 4.30 ರಿಂದ 6 ಗಂಟೆಯವರೆಗೆ ನಗರದ ಕೋವಿಡ್ ಆಸ್ಪತ್ರೆಯ  ವಿಶೇಷ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಮಹಿಳೆಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಪ್ರಸೂತಿ ತಜ್ಞೆ ಡಾ. ಸ್ವಾತಿ, ಅರವಳಿಕೆ ತಜ್ಞ ಡಾ. ಸಮರ್ಥ್, ಮಕ್ಕಳ ತಜ್ಞೆ ಡಾ. ಲಕ್ಷ್ಮಿ ಮತ್ತು ಸಿಬ್ಬಂದಿ  ಪುಟ್ಟಲಿಂಗಮ್ಮ ಮತ್ತು ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ  ನೆರವೇರಿಸಿದೆ.

ಮಹಿಳೆ ದಾಖಲಾಗಿದ್ದ ಹೆರಿಗೆ ವಾರ್ಡ್ ಅನ್ನು ಸ್ಯಾನಿಟೈಸ್ ಮಾಡಲಾಗಿದೆ. ವಾರ್ಡಿನಲ್ಲಿ ಇದ್ದ ಇನ್ನೂ ಐವರನ್ನು ಪ್ರಾಥಮಿಕ ಸಂಪರ್ಕಿತರೆಂದು ಪರಿಗಣಿಸಿ ಇವರ ಕೋವಿಡ್ ಪರೀಕ್ಷೆಗೆ ಕ್ರಮ ತೆಗೆದುಕೊಳ್ಳಲಾಗಿದೆ.ಸದ್ಯಕ್ಕೆ ಇವರನ್ನು ಬೇರೆ ಕಡೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಶಸ್ರಚಿಕಿತ್ಸಕ  ಡಾ.ಕೃಷ್ಣ ಪ್ರಸಾದ್ ತಿಳಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ