NEWSಕೃಷಿನಮ್ಮಜಿಲ್ಲೆ

ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ-ಇಡೀ ರಾಜ್ಯದ  ಬೆಳೆಗಾರರಿಗೆ ಅನುಕೂಲ‌: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

 ಚಿಕ್ಕಬಳ್ಳಾಪುರ: ಶಿಡ್ಲಘಟ್ಟದಲ್ಲಿ ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ ಬೆಳೆಗಾರರಿಗೆ ಅನುಕೂಲ‌ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಲ್ಲೆಯ ಶಿಡ್ಲಘಟ್ಟದಲ್ಲಿ ನಡೆದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಎಚ್.ಎನ್.ವ್ಯಾಲಿ 3ನೇ ಹಂತದಲ್ಲಿ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಲೋಕಾರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಡ್ಲಘಟ್ಟ ಕ್ಷೇತ್ರದಲ್ಲಿ ಇಷ್ಟು ದೊಡ್ಡ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಿರುವುದು ನಮ್ಮ ಸರ್ಕಾರದ ಅಭಿವೃದ್ಧಿ ಪರ್ವದ ವೇಗವನ್ನು ತೋರಿಸುತ್ತಿದೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ. ಗ್ಯಾರಂಟಿ ಕಾರ್ಯಕ್ರಮಗಳಿಗೆ ಒಂದು ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತದ ಹಣ ಇದುವರೆಗೂ ತೆಗೆದಿಟ್ಟಿರುವುದು ಮಾತ್ರವಲ್ಲದೆ, ಇಷ್ಟೇ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನೂ ನಾವು ನಡೆಸುತ್ತಿದ್ದೇವೆ. ಇದಕ್ಕೆ ಇಂದು (ನ.24) ಇಲ್ಲಿ ಉದ್ಘಾಟನೆಗೊಂಡ ಅಭಿವೃದ್ಧಿಯೂ ಸೇರಿದೆ ಎಂದರು.

ಸರ್ಕಾರದ ಬಳಿ ಹಣ ಇಲ್ಲ, ಖಜಾನೆ ಖಾಲಿ ಆಗಿದೆ ಎನ್ನುವ ಬಿಜೆಪಿಯ ಸುಳ್ಳು ಆರೋಪಗಳಿಗೆ ನಮ್ಮ‌ ಸರ್ಕಾರ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರ ಕೊಟ್ಟಿದೆ. ರಾಜ್ಯದ ಪ್ರತೀ ಕುಟುಂಬಗಳಿಗೂ ಪ್ರತೀ ತಿಂಗಳು ಸರ್ಕಾರದ ಹಣ ಮತ್ತು ಕಾರ್ಯಕ್ರಮಗಳು ತಲುಪುತ್ತಿವೆ.

ನಮ್ಮ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ಯಾವ ಗ್ಯಾರಂಟಿ ಯೋಜನೆಗಳೂ ನಿಲ್ಲುವುದಿಲ್ಲ. ಜತೆಗೆ ಸಣ್ಣ ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಅಭಿವೃದ್ಧಿ ನಡೆಸುತ್ತಿದ್ದೇವೆ ಎಂದು ಹೇಳಿದರು.

ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಬೇಕು ಎನ್ನುವುದೂ ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕ್ಷೇತ್ರದ ಶಾಸಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮನವಿಯಂತೆ ಎಲ್ಲಾ ಕಾಮಗಾರಿಗಳಿಗೂ ಅನುದಾನ ನೀಡಲಾಗುವುದು ಎಂದರು.

ಬಿಜೆಪಿಗೆ ರಾಜ್ಯದ ಜನ ಅಧಿಕಾರ, ಅವಕಾಶ ಕೊಟ್ಟಾಗ ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ. ಒಂದೇ ಒಂದು ಮನೆಯನ್ನೂ ಇಡೀ ಸರ್ಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಬಿಜೆಪಿ ವಿತರಣೆ ಮಾಡಲಿಲ್ಲ. ಈಗ ನಾವು ರಾಜ್ಯದ ಜನರ ಮನೆ ಬಾಗಿಲಿಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು, ಕಲ್ಯಾಣ ಕಾರ್ಯಕ್ರಮಗಳನ್ನು ತಲುಪಿಸುತ್ತಿದ್ದೇವೆ. ಇದನ್ನು ಸಹಿಸದ ಬಿಜೆಪಿ ಸುಳ್ಳು ಆರೋಪಗಳ ಮೇಲೆ ಮತ್ತು ರಾಜ್ಯದ ಜನರನ್ನು ವಿಭಜಿಸುವ ಮೂಲಕ ರಾಜಕಾರಣ ಮಾಡುತ್ತಿದೆ ಎಂದರು.

ನಾವು ಜನರನ್ನು ಮತ್ತು ಸಮಾಜವನ್ನು ಬೆಸೆಯುವ ಮೂಲಕ ಅಭಿವೃದ್ಧಿ ರಾಜಕಾರಣ ಮಾಡುತ್ತಿದ್ದೇವೆ. ಶಿಡ್ಲಘಟ್ಟದ ನೇಕಾರ ಸಮುದಾಯಕ್ಕೂ ಅನುಕೂಲ ಮಾಡಿಕೊಡಲಾಗುವುದು. ನಾವು ನುಡಿದಂತೆ ನಡೆಯುತ್ತಿದ್ದೇವೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಹೀಗಾಗಿ 2028 ರಲ್ಲೂ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದರು.

Megha
the authorMegha

Leave a Reply

error: Content is protected !!
Latest news
BMTC: ದೈಹಿಕವಾಗಿ ಫಿಟ್‌ ಇದ್ದರೂ ಲಘುಡ್ಯೂಟಿ ಮಾಡುತ್ತಿರುವ ನೌಕರರ ಸಂಘಟನೆಯ ಮುಖಂಡ- ಕಂಡು ಕಾಣದಂತೆ ಮೌನವಾಗಿರುವ ಅಧಿಕ... ಮೃತ ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆ ಸೇರಿದೆ ಬರೋಬರಿ 79.75 ಕೋಟಿ ರೂ.ಗೂ ಹೆಚ್ಚು ಹಣ ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ