Vijayapatha – ವಿಜಯಪಥ
Friday, November 1, 2024
CrimeNEWSದೇಶ-ವಿದೇಶರಾಜಕೀಯ

ಹಲವು ಪ್ರಕರಣದ ಆರೋಪಿಗೆ ಜಾಮೀನು ಸಿಕ್ಕಿದ್ದು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ: ಸುಪ್ರೀಂ ಕೋರ್ಟ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕಾನ್ಪುರದಲ್ಲಿ ನಡೆದ ಪೊಲೀಸ್ ಎನ್‍ಕೌಂಟರ್‌ನಲ್ಲಿ ಇತ್ತೀಚಿಗೆ ಮೃತಪಟ್ಟ ಪಾತಕಿ ವಿಕಾಸ್ ದುಬೆ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ ಆರೋಪಿ ಜಾಮೀನಿನ ಮೇಲೆ ಹೊರಗಿದ್ದದ್ದು ನ್ಯಾಯಾಂಗ ವ್ಯವಸ್ಥೆಯ ವೈಫಲ್ಯ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪಾತಕಿ ದುಬೆ ಎನ್ ಕೌಂಟರ್ ಪ್ರಕರಣದ ಕುರಿತು ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸೋಮವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಸುಪ್ರೀಂ ಪೀಠ, ಹಲವು ಪ್ರಕರಣಗಳು ದಾಖಲಾಗಿದ್ದರೂ ದುಬೆ ಜಾಮೀನು ಪಡೆದಿರುವುದು ನ್ಯಾಯಾಂಗ ವ್ಯವಸ್ಥೆಯ ಪೈಫಲ್ಯ. ಹಲವು ಪ್ರಕರಣಗಳು ದಾಖಲಾಗಿದ್ದರೂ ಜಾಮೀನು ನೀಡಿರುವುದನ್ನು ನೋಡಿ ನಮಗೆ ಅಚ್ಚರಿಯಾಗಿದೆ ಎಂದಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಕೆಲವು ಹೇಳಿಕೆಗಳನ್ನು ನೀಡಿದ್ದರೆ ಮತ್ತು ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಕ್ರಮ ಅನುಸರಿಸಲಾಗಿದೆ? ಎಂದು ಉತ್ತರ ಪ್ರದೇಶ ಪರವಾಗಿ ವಿಚಾರಣೆಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಅಲ್ಲದೆ ನೀವು ಕಾನೂನನ್ನು ಪಾಲಿಸಬೇಕು ಎಂದು ಸೂಚಿಸಿದೆ.

60ಕ್ಕೂ ಹೆಚ್ಚು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದ ಪಾತಕಿ ದುಬೆ ಮತ್ತು ಆತನ ಸಹಚರರು ಎಂಟು ಪೊಲೀಸರನ್ನು ಹತ್ಯೆ ಮಾಡಿ ಆರು ಮಂದಿಯನ್ನು ಗಾಯಗೊಳಿಸಿದ್ದರು. ನಂತರ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಪಾತಕಿಯನ್ನು ಬಂಧಿಸಿದ್ದ ಪೊಲೀಸರು ಎನ್ ಕೌಂಟರ್ ಮಾಡಿದ್ದರು.

ಇದಕ್ಕೂ ಮೊದಲು ಪಾತಕಿ ವಿಕಾಸ್ ದುಬೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯಗಳು ನೀಡಿದ ಆದೇಶಗಳ ಬಗ್ಗೆ ವರದಿ ನೀಡುವಂತೆಯೂ ಸುಪ್ರೀಂ ಕೋರ್ಟ್ ಸೂಚಿಸಿದ್ದು, ಈ ವೇಳೆ, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರೊಬ್ಬರನ್ನು ಮತ್ತು ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರನ್ನು ದುಬೆ ಎನ್ ಕೌಂಟರ್ ಪ್ರಕರಣದ ತನಿಖಾ ತಂಡದ ಸದಸ್ಯರನ್ನಾಗಿಸುವ ಬಗ್ಗೆ ಪರಿಗಣಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ