NEWSನಮ್ಮಜಿಲ್ಲೆ

ಹಾಸನ: ಹೊಸದಾಗಿ 67 ಕೋವಿಡ್ ಪ್ರಕರಣ ಪತ್ತೆ, ವ್ಯಕ್ತಿ ಸಾವು

ವಿಜಯಪಥ ಸಮಗ್ರ ಸುದ್ದಿ

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 67 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 953 ಕ್ಕೆ ಏರಿಕೆಯಾಗಿದೆ. ಈವರೆಗೆ 569 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 355 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದುವರೆಗೆ 29 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಇಂದು ಮೃತ ಪಟ್ಟ 42 ವರ್ಷದ ವ್ಯಕ್ತಿಯು ಹಾಸನ ತಾಲೂಕಿಗೆ ಸಂಬಂಧಿಸಿದವರಾಗಿದ್ದು ಇವರು ಸಕ್ಕರೆ ಕಾಯಿಲೆಯಿಂದ ಹಾಗೂ ಉಸಿರಾಟದ ತೊಂದರೆಯಿಂದ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು  ಮಾಹಿತಿ ನೀಡಿದರು.

ಇಂದು ಪತ್ತೆಯಾದ 67 ಪ್ರಕರಣಗಳಲ್ಲಿ 6 ಜನ ಅರಸೀಕೆರೆ ತಾಲೂಕಿನವರು, 3 ಮಂದಿ ಚನ್ನರಾಯಪಟ್ಟಣ ತಾಲೂಕಿನವರು, 23 ಜನ ಹಾಸನ ತಾಲ್ಲೂಕು, 8 ಜನ ಹೊಳೆನರಸೀಪುರ ತಾಲೂಕು, ಆಲೂರು ತಾಲೂಕಿನಲ್ಲಿ 8 ಜನ, 11 ಜನ ಅರಕಲಗೂಡು ತಾಲ್ಲೂಕು, 8 ಜನ ಬೇಲೂರು ತಾಲೂಕಿನವರಾಗಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...