NEWSನಮ್ಮರಾಜ್ಯರಾಜಕೀಯ

ಬೆಂಗಳೂರಿನಲ್ಲಿ ಜುಲೈ 21ರ ಬಳಿಕ ಲಾಕೂ ಇಲ್ಲ, ಡೌನೂ ಇಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಜುಲೈ 14ರಿಂದ ಜಾರಿಗೆ ಬಂದಿರುವ ಲಾಕ್‌ಡೌನ್‌ ಇದೇ 21ರಂದು ಮುಗಿಯಲಿದ್ದು ಇದನ್ನು ಮತ್ತೆ ವಿಸ್ತರಿಸದೇ ಇರಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನ ಕೊರೊನಾ ನಿಯಂತ್ರಣ ಸಭೆಯಲ್ಲಿ ಸಿಎಂ  ಈ ಬಗ್ಗೆ ಸ್ಪಷ್ಟವಾಗಿ ಈ ನಿರ್ಧಾರವನ್ನು ತಿಳಿಸಿದ್ದು, ಲಾಕ್ ಡೌನ್ ವಿಸ್ತರಣೆ ಬಗ್ಗೆ ಮೊನ್ನೆಯೂ ಬೇಡ ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಪದೇಪದೆ ಆ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಹೇಳಿದ್ದಾರೆ.

ವಲಯಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನಹರಿಸಿ. ಟ್ರೇಸಿಂಗ್, ಟೆಸ್ಟಿಂಗ್ ಬಗ್ಗೆ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸಚಿವರಿಗೆ ಸಿಎಂ ಬಿಎಸ್‌ವೈ ಖಡಕ್ ಸೂಚನೆ ನೀಡಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಸೋಮಣ್ಣ, ಲಾಕ್ ಡೌನ್ ವಿಸ್ತರಣೆ ಬೇಡ, ವಿಸ್ತರಣೆ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ. ಲಾಕೂ ಇಲ್ಲ, ಡೌನೂ ಇಲ್ಲ. ಸಿಎಂ ವಲಯವಾರು ಬಗ್ಗೆ ಪರಿಶೀಲನೆ ಮಾಡುತ್ತಾರೆ ಎಂದು ತಿಳಿಸಿದರು.

ಆದರೆ ಭಾನುವಾರ ಕರ್ಫ್ಯೂ ಇರುತ್ತದೆ. ಇದರ ಜತೆ ನೈಟ್ ಕರ್ಫ್ಯೂ ಇರುತ್ತದೆ. ಬುಧವಾರದಿಂದ ಲಾಕ್ ಡೌನ್ ಬೇಡ ಎಂಬ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ