CrimeNEWSದೇಶ-ವಿದೇಶರಾಜಕೀಯ

ಪ್ರಧಾನಿ ದಿ.ರಾಜೀವ್‌ ಗಾಂಧಿ ಹಂತಕಿ ಆತ್ಮಹತ್ಯೆ ಯತ್ನ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಯ ಆರೋಪಿ ನಳಿನಿ ಶ್ರೀಹರನ್ ಸೋಮವಾರ ರಾತ್ರಿ ವೆಲ್ಲೂರು ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಕೆ ವಕೀಲರು ತಿಳಿಸಿದ್ದಾರೆ.

ಕಳೆದ 29 ವರ್ಷಗಳಿಂದ ಆಕೆ ಜೈಲಿನಲ್ಲಿದ್ದಾಳೆ. ಈ ನಡುವೆ ನಿನ್ನೆ ರಾತ್ರಿ ಮತ್ತೊಬ್ಬ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯೊಂದಿಗೆ ಆಕೆ ಗಲಾಟೆ ಮಾಡಿಕೊಂಡಿದ್ದರು. ಅದನ್ನು ಜೈಲರ್‌ಗೆ ತಿಳಿಸಿದ್ದರಿಂದ ಆ ಬಗ್ಗೆ ಜೈಲರ್‌ ವಿಚಾರಿಸಲು ಹೋಗಿದ್ದರು. ಈ ವೇಳೆ ಆಕೆ ಆತ್ಮಹತ್ಯೆ ಮಾಡಿಕೊಳ್ಳುವ ಬೇದರಿಕೆ ಹಾಕಿದ್ದಾಳೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಆಕೆ ಪರ ವಕೀಲ ಪುಗಲೆಂತಿ ಅವರು ರಾಷ್ಟ್ರೀಯ ಸುದ್ದಿವಾಹಿನಿಯೊಂದಕ್ಕೆ ಮಾಹಿತಿ ನೀಡಿದ್ದು, ಇದೇ ಮೊದಲ ಬಾರಿಗೆ ಅವರು ಇಂಥ ನಿರ್ಧಾರಕ್ಕೆ ಬಂದಿದ್ದಾರೆ. ಕಾರಣ ಆಕೆಯ ಸೆಲ್‌ನಲ್ಲೇ ಇರುವ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮತ್ತೊಬ್ಬ ಕೈದಿ  ನಡುವೆ ಗಲಾಟೆ ಆಗಿದ್ದು. ಅದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಹೇಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಅಪರಾಧಿ ನಳಿನಿಗೆ ಮಗಳ ಮದುವೆಗೆ 30 ದಿನಗಳ ಪೆರೋಲ್ ಸಿಗಬೇಕಿದೆ. ಈ ನಡುವೆ ಗಲಾಟೆ ಆಗಿದ್ದರಿಂದ ಆಕೆಯನ್ನು ಮತ್ತೊಂದು ಜೈಲಿಗೆ ಸ್ಥಳಾಂತರಿಸುವ ಕ್ರಮವನ್ನು ಕೈಗೊಳ್ಳಲಾಗುತ್ತಿತ್ತು. ಇದರಿಂದಲೂ ಈ ರೀತಿ ನಡೆದುಕೊಂಡಿದ್ದಾಳೆ ಎಂದು ಹೇಳಲಾಗಿದೆ.

ರಾಜೀವ್ ಗಾಂಧಿಯವರ ಹತ್ಯೆಯಲ್ಲಿ ನಳಿನಿ ಮತ್ತು ಅವರ ಪತಿ ಮುರುಗನ್ ಸೇರಿದಂತೆ ಏಳು ಮಂದಿ ಪಾತ್ರವಹಿಸಿದ್ದರು. ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಯಿತು, ಆದರೆ ನಂತರ ಅದನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಲಾಯಿತು.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...