NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಜುಲೈ 21- ರಾಜ್ಯದಲ್ಲಿ 3649 ಕೊರೊನಾ ಸೋಂಕು ದೃಢ, 61 ಮಂದಿ ಮರಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಮಂಗಳವಾರವೂ ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 3649 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  71,069 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  61 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1470 ಕ್ಕೆ  (ಅನ್ಯ ಕಾರಣಕ್ಕೆ 6ಸೇರಿ) ಏರಿಕೆಯಾಗಿದೆ.

ಕೊರೊನಾ  ಸೋಂಕಿನಿಂದ  24 ಗಂಟೆಯಲ್ಲಿ ಬೆಂಗಳೂರಿನಲ್ಲಿ 22 ಮಂದಿ ಸೇರಿ ರಾಜ್ಯದಲ್ಲಿ ಒಟ್ಟು 61 ಮಂದಿ ಮೃತಪಟ್ಟಿದ್ದು, ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್  ಮಾಹಿತಿ ನೀಡಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1714 ಪ್ರಕರಣಗಳು ಸೇರಿ ರಾಜ್ಯದಲ್ಲಿ ಒಟ್ಟು 3649 ಮಂದಿಗೆ  ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 71,069ಕ್ಕೇರಿಕೆಯಾಗಿದೆ. ಈ ಪೈಕಿ 583 ಮಂದಿ ಗಂಭೀರ ಸ್ಥಿತಿಯಲ್ಲಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಂಗಳೂರಿನಲ್ಲಿ 520 ಜನ ಸೇರಿ ಒಟ್ಟು 1,664 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಉಳಿದಂತೆ ಬಳ್ಳಾರಿಯಲ್ಲಿ 193, ದಕ್ಷಿಣ ಕನ್ನಡದಲ್ಲಿ 149, ಮೈಸೂರಿನಲ್ಲಿ 135, ಯಾದಗಿರಿಯಲ್ಲಿ 117, ಉತ್ತರ ಕನ್ನಡದಲ್ಲಿ 109, ಹಾಸನದಲ್ಲಿ 107, ಕೋಲಾರದಲ್ಲಿ 103, ಕಲಬುರಗಿಯಲ್ಲಿ 99, ದಾವಣಗೆರೆಯಲ್ಲಿ 95, ಬೆಂಗಳೂರು ಗ್ರಾಮಾಂತರದಲ್ಲಿ 95, ಉಡುಪಿ, ಧಾರವಾಡದಲ್ಲಿ ತಲಾ84, ಚಿಕ್ಕಬಳ್ಳಾಪುರದಲ್ಲಿ 81, ಚಿಕ್ಕಮಗಳೂರಿನಲ್ಲಿ 68, ಬೀದರ್‌ನಲ್ಲಿ 66, ಬಾಗಲಕೋಟೆಯಲ್ಲಿ 65, ತುಮಕೂರು 47, ಕೊಪ್ಪಳ 45, ಹಾವೇರಿ 39, ಚಾಮರಾಜನಗರ 34, ಬೆಳಗಾವಿ 23, ಚಿತ್ರದುರ್ಗ 23, ಶಿವಮೊಗ್ಗ 20, ಗದಗದಲ್ಲಿ 15, ವಿಜಯಪುರ, ಮಂಡ್ಯದಲ್ಲಿ ತಲಾ 13, ರಾಮನಗರದಲ್ಲಿ 8, ರಾಯಚೂರಿನಲ್ಲಿ 4, ಕೊಡಗಿನಲ್ಲಿ 1 ಪ್ರಕರಣಗಳು ವರದಿಯಾಗಿವೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ     https://play.google.com/store/apps/detail

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...