NEWSನಮ್ಮರಾಜ್ಯರಾಜಕೀಯ

ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ: ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಒಂದೇ ಪರಿಹಾರವಲ್ಲ. ಹೀಗಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಸೋಂಕು ನಿಯಂತ್ರಣ ಮಾಡಬಹುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಆಗುವುದಿಲ್ಲ. ಆದರೆ ರಾಜ್ಯಾದ್ಯಂತ ಹಾಗೂ ಬೆಂಗಳೂರಿನಲ್ಲಿ ಭಾನುವಾರದ ಲಾಕ್‌ಡೌನ್ ಹಾಗೂ ರಾತ್ರಿ ಕರ್ಫ್ಯೂ ಕುರಿತಂತೆ ಸರ್ಕಾರ ಅನ್‌ಲಾಕ್‌ 2.0 ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಆದೇಶ ಮಾಡಿದೆ.

ಆರಂಭದಲ್ಲಿ ನಾವು ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾಡಿದ್ದೇವು. ಆದರೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವುದು ರಾಜ್ಯದ ಜನರ ಗಮನಕ್ಕೆ ಬಂದಿದೆ. ಆದರೂ ರಾಜ್ಯಾದ್ಯಂತ ಲಾಕ್‌ಡೌನ್ ತೆರವುಗೊಳಿಸಲಾಗಿದೆ. ಹೀಗಾಗಿ ಸಾಮಾನ್ಯರು, ವ್ಯಾಪಾರಸ್ಥರು ಹಾಗೂ ಇತರ ಕ್ಷೇತ್ರಗಳ ಜನತೆ ಎಂದಿನಂತೆ ತಮ್ಮ ಕೆಲಸಗಳಲ್ಲಿ ತೊಡಗಬಹುದು. ಇದರಿಂದ ಜೀವನ ದುಸ್ತರವಾಗುವುದನ್ನು ತಡೆಯುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.

ರಾಜ್ಯಾದ್ಯಂತ ಲಾಕ್‌ಡೌನ್ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ. ಆದರೆ ಬೆಂಗಳೂರು ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿ ಜಾರಿಗೆ ತಂದಿದ್ದ ಭಾನುವಾರದ ಲಾಕ್‌ಡೌನ್ ಹಾಗೂ ರಾತ್ರಿ ಕರ್ಫ್ಯೂ ಎಂದಿನಂತೆ ಇರಲಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್  ಅನ್‌ಲಾಕ್‌ ಆದೇಶದಲ್ಲಿ ತಿಳಿಸಿದ್ದಾರೆ.

ಅನ್‌ಲಾಕ್‌ ಮಾರ್ಗಸೂಚಿ ಆದೇಶದಲ್ಲಿಯೂ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿರುತ್ತದೆ. ಜತೆಗೆ ಈಗಾಗಲೇ ಜಾರಿಯಲ್ಲಿರುವಂತೆ ಭಾನುವಾರದ ಲಾಕ್‌ಡೌನ್ ಕೂಡ ಮುಂದುವರಿಯಲಿದೆ.   ಅನ್‌ಲಾಕ್‌ 2.0 ಜತೆಗೆ ಲಾಕ್‌ಡೌನ್ ಹಿಂದಕ್ಕೆ ಪಡೆಯಲಾಗಿದ್ದರೂ ಕೂಡ ಇನ್ನು ಕೆಲವು ಲಾಕ್‌ಡೌನ್ ಮಾರ್ಗಸೂಚಿ ಮುಂದುವರಿಯಲಿದೆ.

ಪಾರ್ಕ್‌ಗಳಲ್ಲಿ ಕುಳಿತುಕೊಳ್ಳುವ ಬೆಂಚ್‌ಗಳನ್ನು ಉಪಯೋಗಿಸುವುದು ಹಾಗೂ ಜಿಮ್ ಸಾಧನಗಳನ್ನು ಬಳಸುವುದು ಕೂಡ ಮುಂದುವರಿಯಲಿದೆ. ಜತೆಗೆ ಜನಸಂದಣಿ ತಡೆಗಟ್ಟುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೂ ತರಕಾರಿ ಮಾರುಕಟ್ಟೆಯನ್ನು ಎಪಿಎಂಸಿ ಅಥವಾ ಬೇರೆ ವಿಶಾಲ ಪ್ರದೇಶಗಳಿಗೆ ಸ್ಥಳಾಂತರ ಮಾಡುವಂತೆ ಅನ್‌ಲಾಕ್‌ 2.0 ಮಾರ್ಗಸೂಚಿಯಲ್ಲಿ ಆದೇಶ ಮಾಡಲಾಗಿದೆ.

ಅನ್‌ಲಾಕ್ 2.0 ಮಾರ್ಗಸೂಚಿಗಳು ಈ ಮೇಲಿನ ಬದಲಾವಣೆಗಳೊಂದಿಗೆ ಜಿಲ್ಲಾಡಳಿತಗಳಿಂದ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸುವವರಗೆ ಅಂದರೆ ಜುಲೈ 31, 2020ರ ವರೆಗೆ ಮುಂದುವರಿಯಲಿದೆ ಎಂದು ರಾಜ್ಯ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...