CRIMENEWSಸಿನಿಪಥ

ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟ ಕಾಮೆಂಟ್ ಮಾಡಿ ಜೈಲು ಪಾಲಾದವರ ಕ್ಷಮಿಸಿದ ಮೋಹಕತಾರೆ ರಮ್ಯಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮ್ಮ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟ ಕಾಮೆಂಟ್ ಮಾಡಿ ಜೈಲು ಪಾಲಾದ ಕುಟುಂಬ ಕ್ಷಮೆ ಕೋರಿದ್ದರಿಂದ ನಟಿ ರಮ್ಯಾ ಆ ಕುಟುಂಬ ಹಾಗೂ ಕಾಮೆಂಟ್ ಮಾಡಿದವರನ್ನು ಕ್ಷಮಿಸಿದ್ದು, ಈ ವಿಷಯವನ್ನು ಇಂದು ಖುದ್ದು ಮೋಹಕತಾರೆ, ನಟಿ ರಮ್ಯಾ ತಿಳಿಸಿದ್ದಾರೆ.

ಒಂದೆರೆಡು ತಿಂಗಳ ಹಿಂದೆ ಸೋಷಿಯಲ್ ಮೀಡಿಯಾಗಳಲ್ಲಿ ನಟ ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ನಟಿ ರಮ್ಯಾ ಅವರಿಗೆ ಅಶ್ಲೀಲವಾಗಿ ಕಾಮೆಂಟ್ ಮಾಡಲಾಗಿತ್ತು. ಕೊಲೆ ಬೆದರಿಕೆ, ರೇಪ್ ಬೆದರಿಕೆಯನ್ನು ಸೋಷಿಯಲ್ ಮೀಡಿಯಾ ಮೂಲಕ ಹಾಕಿದ್ದರು. ಇದರ ವಿರುದ್ಧ ನಟಿ ರಮ್ಯಾ ಸಿಡಿದೆದಿದ್ದರು.

ಬೆಂಗಳೂರು ಪೊಲೀಸ್ ಕಮೀಷನರ್ ಅವರನ್ನು ಭೇಟಿಯಾಗಿ ಸೋಷಿಯಲ್ ಮೀಡಿಯಾ ಖಾತೆಗಳ ವಿವರದ ಸಹಿತ ಲಿಖಿತ ದೂರು ನೀಡಿದ್ದರು. ಈ ದೂರನ್ನು ದಾಖಲಿಸಿಕೊಂಡಿದ್ದ ಪೊಲೀಸರು ಸೋಷಿಯಲ್ ಮೀಡಿಯಾ ಖಾತೆಗಳ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಜೈಲಿಗೆ ಕಳಿಸಿದ್ದರು.

ಆರೋಪಿಗಳಿಗೆ ಕೆಲ ತಿಂಗಳವರೆಗೂ ಬೇಲ್ ಕೂಡ ಸಿಕ್ಕಿರಲಿಲ್ಲ. ಈಗ ಕೆಲವರಿಗೆ ಬೇಲ್ ಸಿಕ್ಕಿದೆ. ಇನ್ನೂ ದೂರು ನೀಡಿದ್ದ ನಟಿ ರಮ್ಯಾ ಅವರನ್ನು ಭೇಟಿಯಾಗಿ ಆರೋಪಿಗಳ ಕುಟುಂಬಸ್ಥರು ತಮ್ಮ ಮನೆಯ ಮಗ ಮಾಡಿದ ತಪ್ಪನ್ನು ಕ್ಷಮಿಸಬೇಕೆಂದು ಕಣ್ಣೀರು ಹಾಕಿ ಮನವಿ ಮಾಡಿಕೊಂಡಿದ್ದರು. ಅವರ ಜೀವನ ಹಾಳಾಗುತ್ತೆ. ಗೊತ್ತಿಲ್ಲದೇ ತಪ್ಪು ಮಾಡಿ ಈಗ ಜೈಲು ಪಾಲಾಗಿದ್ದಾರೆ. ಇಡೀ ಕುಟುಂಬ ಸಂಕಷ್ಟದಲ್ಲಿದೆ. ಹೀಗಾಗಿ ಮಾನವೀಯತೆಯಿಂದ ಕ್ಷಮಿಸಬೇಕೆಂದು ನಟಿ ರಮ್ಯಾಗೆ ಮನವಿ ಮಾಡಿದ್ದರು.

ಆ ಕುಟುಂಬಗಳ ಸಂಕಷ್ಟ, ನೋವಿಗೆ ಮಿಡಿದ ನಟಿ ರಮ್ಯಾ, ತಮ್ಮ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದವರನ್ನು ಕ್ಷಮಿಸುವ ದೊಡ್ಡ ಗುಣ ತೋರಿದ್ದಾರೆ. ಇದರಿಂದ ಆರೋಪಿಗಳಿಗೆ ಈಗ ಜಾಮೀನು ಸಿಕ್ಕಿದೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ನಟಿ ರಮ್ಯಾ ಪ್ರತಿಕ್ರಿಯಿಸಿದ್ದು, ಆರೋಪಿಗಳನ್ನು ನಾನು ಯಾವಾಗಲೋ ಕ್ಷಮಿಸಿದ್ದೇನೆ. ಆದರೆ ಈ ರೀತಿ ಯಾರಿಗೂ ಮಾಡಬಾರದು ಅನ್ನೋದು ನನ್ನ ಉದ್ದೇಶ. ಇದು ಮತ್ತೆ ರಿಪೀಟ್ ಆಗಲ್ಲ ಅಂತ ಭಾವಿಸುತ್ತೇನೆ. ಅವರಿಗೆ ಶಿಕ್ಷೆ ಕೊಡಬೇಕು ಅನ್ನೋ ಉದ್ದೇಶ ಇರಲಿಲ್ಲ ಅವರಿಗೆ ಪಾಠ ಕಲಿಸುವ ಉದ್ದೇಶ ಅಷ್ಟೇ ಇದ್ದದ್ದು ಎಂದು ಹೇಳಿದ್ದಾರೆ.

ತಪ್ಪು ಮಾಡಿದವರ ಕುಟುಂಬ ನನ್ನ ಕ್ಷಮೆ ಕೇಳೋದು ಬೇಡ. ನನಗೆ ಕ್ಷಮೆ ಕೇಳುವ ಬದಲು ನಿಮ್ಮ ಮಕ್ಕಳಿಗೆ ಬುದ್ದಿ ಹೇಳಿ. ಬಡವರು ಅಂತೀರಾ, ಫೋನ್ ಇದೆ, ಡೇಟಾ ಇದೆ ಅಂತ ಹೀಗೆ ಮಾಡಬಾರದು. ನಿಮ್ಮ ಮಕ್ಕಳಿಗೆ ಬುದ್ಧಿ ಹೇಳಿ ಎಂದು ರಮ್ಯಾ, ಆರೋಪಿಗಳ ಕುಟುಂಬಸ್ಥರಿಗೆ ಸಲಹೆ ನೀಡಿದ್ದಾರೆ.

ಇನ್ನು ಹೆಣ್ಣು ಮಕ್ಕಳ ವಿಚಾರದಲ್ಲಿ ಸಮಾಜಕ್ಕೆ ಒಳ್ಳೆ ಸಂದೇಶ ಕೊಡಬೇಕಿತ್ತು. ಸದ್ಯ ನ್ಯಾಯಾಲಯದ ಮೂಲಕ ಬುದ್ದಿ ಹೇಳಬೇಕಿತ್ತು. ಈಗ ಎಲ್ಲರೂ ಬೇಲ್ ನಲ್ಲಿ ಆಚೆ ಇದ್ದಾರೆ ಅವರಿಗೆ ಒಳ್ಳೆಯದಾಗಲಿ ಎಂದರು.

ಹೆಣ್ಣು ಬೆತ್ತಲೆಯಾಗಿದ್ದರು, ಗಂಡು ಕಣ್ಣೆತ್ತಿ ನೋಡಬಾರದು ನಟಿ ನಿಶ್ವಿಕಾ ನಾಯ್ಡು ಹೇಳಿಕೆ ವಿಚಾರಕ್ಕೆ ನಟಿ ರಮ್ಯಾ ಪ್ರತಿಕ್ರಿಯಿಸಿ, ನಿಶ್ವಿಕಾ ಹೇಳಿದ್ದು ಸರಿ ಇದೆ. ಗಂಡಸರಿಗೆ ಇರುವಷ್ಟೇ ಹಕ್ಕು ನಮಗೂ ಇದೆ. ನೀವು ಇಷ್ಟ ಬಂದ ಹಾಗೇ ಬಟ್ಟೆ ಹಾಕ್ತೀರಾ. ನಾವು ಹಾಕಬಾರದಾ..? ಹೆಣ್ಣು ಮಕ್ಕಳಿಗೂ ಸ್ವಾತಂತ್ರ್ಯ ಇದೆ.

ನಿಮಗೆ ಇಷ್ಟ ಇಲ್ಲ ಅಂದ್ರೆ ಕಾಮೆಂಟ್ ಮಾಡೋಕೆ ಹೋಗಬೇಡಿ. ಸೋಷಿಯಲ್ ಮೀಡಿಯಾದಲ್ಲಿ ಎಲ್ಲರಿಗೂ ಅಕೌಂಟ್ ಇದೆ. ಅಭಿಪ್ರಾಯ ಇದೆ. ಹಾಗಂತ ಕೆಟ್ಟ, ಅಶ್ಲೀಲ, ಅಸಭ್ಯ ಕಾಮೆಂಟ್ ಮಾಡಬಾರದು ಎಂದು ನಟಿ ರಮ್ಯಾ, ಯುವಕರಿಗೆ ಬುದ್ಧಿವಾದ ಹೇಳಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ