ತಿ.ನರಸೀಪುರ: ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀಡನಹಳ್ಳಿ ಗ್ರಾಮದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಗ್ರಾಮದ ಸೋಂಕಿತರ ಮನೆಗೆ ಗ್ರಾಪಂ ಅಧಿಕಾರಿಗಳು ಭೇಟಿ ನೀಡಿದ್ದರು.
ಕೊರೊನಾ ಸೋಂಕಿತರನ್ನು ಮೈಸೂರಿನ ನಿಗದಿತ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಮನೆಯವರಿಗೆ ಸೋಂಕಿನ ಬಗ್ಗೆ ತಿಳಿವಳಿಕೆ ನೀಡಿ ಮನೆಯಿಂದ ಹೊರ ಬಾರದಂತೆ ತಿಳಿಸಿದ್ದಾರೆ.
ಇನ್ನು ಅವರ ಮನೆಯವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದ್ದು, ಅವರ ಗಂಟಲು ದ್ರವವನ್ನು ಕೋವಿಡ್ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ.
ಆದರೆ ಕೊರೊನಾ ಸೋಂಕಿತರ ಬೀದಿಯನ್ನು ಇನ್ನು ಸೀಲ್ಡೌನ್ ಮಾಡಿಲ್ಲ, ನಾಳೆ (ಜುಲೈ 24) ತಹಸೀಲ್ದಾರ್ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರೀಶಿಲಿಸಿದ ಬಳಿಕ ಮುಂದಿನ ಕ್ರಮ ಜರುಗಿಸಲಿದ್ದಾರೆ ಎಂದು ಗ್ರಾಪಂ ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟಾರೆ ಕೊರೊನಾ ಗ್ರಾಮಗ್ರಾಮಕ್ಕೂ ಹಬ್ಬುತ್ತಿದ್ದು, ಜನರು ತಮ್ಮ ಜೀವನ ಜೀವವನ್ನು ಅತ್ಯಂತ ಜಾಗರೂಕತೆಯಿಂದ ನಿಭಾಯಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ನಾವು ಹಳ್ಳಿಯಲ್ಲಿ ಇದ್ದೇವೆ ನಮಗೆ ಕೊರೊನಾ ಸೋಂಕು ಬರುವುದಿಲ್ಲ ಎಂಬ ಭ್ರಮೆಯನ್ನು ಬಿಟ್ಟು ಆರೋಗ್ಯದ ಕಡೆಗೆ ಹೆಚ್ಚಿನ ಗಮನಕೊಡಬೇಕಿದೆ.