CRIMENEWSಸಿನಿಪಥ

ಅಪಾರ್ಥ ಮಾಡ್ಕೊಬೇಡಿ ಖ್ಯಾತಿಯ ಹಿರಿಯ ಹಾಸ್ಯನಟ ಉಮೇಶ್ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ಹಾಸ್ಯನಟ ಉಮೇಶ್ ಇಂದು ಬೆಳಗ್ಗೆ ಇಹಲೋಕತ್ಯಜಿಸಿದ್ದಾರೆ. 80 ವರ್ಷದ ಉಮೇಶ್‌ ಅವರು ಕ್ಯಾನ್ಸರ್​​ಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಬೆಳಗ್ಗೆ 8.35ರ ಸುಮಾರಿಗೆ ವಿಧಿವಶರಾಗಿದ್ದಾರೆ.

ಜೆ.ಪಿ. ನಗರದ ನಿವಾಸದಲ್ಲಿ ಎಂ.ಎಸ್.ಉಮೇಶ್ (ಮೈಸೂರು ಶ್ರೀಕಂಠಯ್ಯ ಉಮೇಶ್) ಅವರ ಅಂತಿಮ ದರ್ಶನಕ್ಕೆ ನಿರ್ಧರಿಸಲಾಗಿದೆ. ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಉಮೇಶ್ ಅವರ ಪುತ್ರಿ ಜಯಲಕ್ಷ್ಮೀ ಹೇಳಿದ್ದಾರೆ.

ಕಿದ್ವಾಯಿ ಆಸ್ಪತ್ರೆಯಿಂದ ಜೆ.ಪಿ. ನಗರದ ನಿವಾಸಕ್ಕೆ ಉಮೇಶ್ ಅವರ ಪಾರ್ಥಿವಶರೀರವನ್ನು ತರಲಾಗುತ್ತಿದೆ. ಇನ್ನು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಲಾವಿದರ ಸಂಘದ ಶಶಿಕಲಾ ಅವರು ಕಳೆದ ಹಲವು ದಿನಗಳಿಂದ ಉಮೇಶ್ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದರು. ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾಗ ಸಾಕಷ್ಟು ಚಾರ್ಮ್ ಇತ್ತು ಆದ್ರೆ ಆರೋಗ್ಯದಲ್ಲಿ ಏನೇನಾಯ್ತು ಅನ್ನೋದು ನನಗೆ ಗೊತ್ತಿಲ್ಲ. ಆದ್ರೆ ಅವರ ಜತೆಗೆ ನಾನು ಕೊನೆಯವರೆಗೂ ಇದ್ದೆ ಅಂತ ಹೇಳಿದ್ದಾರೆ.

ಬಾಡಿ ಚೆಕ್ ಅಪ್ ಮಾಡಿದಾಗ ದುರಂತ ತಿಳಿದಿದ್ದು, ನಂತರ ಕುಟುಂಬಕ್ಕೆ ವಿಷಯ ತಿಳಿಸಲಾಯಿತು. ಇಂದು ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರವನ್ನು ಮನೆಗೆ ತರಲಾಗುವುದು. ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.

ಇನ್ನು ಕುಟುಂಬಸ್ಥರ ಜತೆ ಚರ್ಚಿಸಿ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಅಂತ್ಯಕ್ರಿಯೆ ಎಲ್ಲಿ ಮಾಡಬೇಕು ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ ಎಂದು ತಿಳಿಸಿದ್ದಾರೆ.

ನೀವೇನೂ ಬೇಜಾರ್ ಮಾಡ್ಕೊಂಡಿಲ್ಲ ಅಂದ್ರೆ…?, ಅಯ್ಯಯ್ಯೋ ಅಪಾರ್ಥ ಮಾಡ್ಕೊಂಡ್‌ಬಿಟ್ರೋ ಏನೋ?, ಅಪಾರ್ಥ ಮಾಡ್ಕೊಬೇಡಿ… ಈ ಸಾಲುಗಳನ್ನು ಕೇಳಿದಾಕ್ಷಣ ನೆನಪಾಗೋದೇ ಉಮೇಶ್‌ ಅವರು.

ವಿಭಿನ್ನ ಹಾವಭಾವ, ಹಾಸ್ಯಭರಿತ ಸಂಭಾಷಣೆಗಳ ಮೂಲಕ ಚಿರಪರಿಚಿತರಾಗಿದ್ದಾರೆ. ಅವರು ಪತ್ನಿ, ಮಗಳು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಉಮೇಶ್ ಅವರ ಪುತ್ರ ಕೆಲ ವರ್ಷಗಳ ಹಿಂದೆ ಅಪಘಾತದಲ್ಲಿ ತೀರಿಕೊಂಡಿದ್ದರು.

ಕೆ. ಹಿರಣ್ಣಯ್ಯ ಮಿತ್ರ ಮಂಡಲಿ, ಗುಬ್ಬಿ ಕಂಪನಿಯಲ್ಲಿ ರಂಗಭೂಮಿ ಕಲಾವಿದರಾಗಿದ್ದ ಉಮೇಶ್, ಪುಟ್ಟಣ್ಣ ಕಣಗಾಲ್ ಅವರ ಮೂಲಕ 1960-61ರಲ್ಲಿ ‘ಮಕ್ಕಳ ರಾಜ್ಯ’ ಎನ್ನುವ ಸಿನಿಮಾನದಲ್ಲಿ ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಕನ್ನಡ, ತಮಿಳು ಭಾಷೆಯಲ್ಲಿ ಈ ಸಿನಿಮಾ ತೆರೆಕಂಡಿತ್ತು.

ಅದಾದ ಬಳಿಕ 1976ರಲ್ಲಿ ತೆರೆಕಂಡ ಮೂರು ಕಥೆಗಳನ್ನೊಳಗೊಂಡ ‘ಕಥಾಸಂಗಮ’ ಸಿನಿಮಾದಲ್ಲಿ ‘ಮುನಿತಾಯಿ’ ಎನ್ನುವ ಕಥೆಯಲ್ಲಿ ಉಮೇಶ್ ಕಾಣಿಸಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗಕ್ಕೆ ಮರಳಿದ್ದರು.

ಅನುಪಮಾ, ಭಾಗ್ಯವಂತರು, ಕಿಲಾಡಿ ಜೋಡಿ, ಗುರು ಶಿಷ್ಯರು, ಭೂಮಿಗೆ ಬಂದ ಭಗವಂತ, ಹಾಲು ಜೇನು, ಕಾಮನಬಿಲ್ಲು, ಅಪೂರ್ವ ಸಂಗಮ, ಶೃತಿ ಸೇರಿದಾಗ, ಮೇಘ ಮಂದಾರ. ಆಕಸ್ಮಿಕ, ಸರ್ವರ್ ಸೋಮಣ್ಣ, ಮೇಘಮಾಲೆ, ನನ್ನಾಸೆಯ ಹೂವೆ, ಜಾಕಿ, ಯಾಂಬೊ, ಮುಸ್ಸಂಜೆ ಮಾತು, ಗೋಲ್‌ಮಾಲ್ ರಾಧಾಕೃಷ್ಣ, ಡೇರ್ ಡೆವಿಲ್ ಮುಸ್ತಫಾ, ಹಗಲುವೇಷ ಸೇರಿದಂತೆ ಇತ್ತೀಚಿನ ಸಿನಿಮಾಗಳಲ್ಲೂ ಉಮೇಶ್ ನಟಿಸಿದ್ದಾರೆ. ಹೀಗೆ 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಮೂಲಕ ಉಮೇಶ್ ಕನ್ನಡಿಗರ ಮನಗೆದ್ದಿದ್ದಾರೆ.

ರಮೇಶ್ ಅರವಿಂದ ನಟನೆಯ ‘ವೆಂಕಟ ಇನ್ ಸಂಕಟ’ ಸಿನಿಮಾದಲ್ಲಿ ಹಳೆಯ ಕಾಲದ ಅಜ್ಜಿಯ ಪಾತ್ರದ ಮೂಲಕ ಉಮೇಶ್ ಪ್ರೇಕ್ಷಕರನ್ನು ರಂಜಿಸಿದ್ದ ಅವರು ಈಗ ನೆನಪುಮಾತ್ರ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ