NEWSನಮ್ಮಜಿಲ್ಲೆ

ಮದ್ದೂರು ಟಿಬಿ ವೃತ್ತದಿಂದ ಕೊಲ್ಲಿ ವೃತ್ತವರೆಗೆ ರಸ್ತೆ ಅಗಲೀಕರಣ ಕುರಿತು ಸಿಎಂ ಚರ್ಚೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಟಿ.ಬಿ.ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಇಂದು ಅಧಿಕಾರಿಗಳ ಜತೆ ಸಭೆ ನಡೆಸಿದರು.

ಸಭೆಯಲ್ಲಿ 2025 -26ನೇ ಸಾಲಿನ ವಾರ್ಷಿಕ ಬಜೆಟಲ್ಲಿ ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣಕ್ಕಾಗಿ ವಿಸ್ತೃತ ಯೋಜನಾ ವರದಿಗಳನ್ನು ತಯಾರಿಸಲು ಘೋಷಿಸಲಾಗಿತ್ತು. ಅದರಂತೆ ಲೋಕೋಪಯೋಗಿ ಇಲಾಖೆಯಿಂದ ವಿಸ್ತೃತ ಯೋಜನಾ ವರದಿಯನ್ನೂ ತಯಾರಿಸಲಾಗಿದೆ.

ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆಯು ಜನ ನಿಬಿಡ ಹಾಗೂ ವಾಣಿಜ್ಯ ಚಟುವಟಿಕೆಯುಳ್ಳ ಜಿಲ್ಲಾ ಮುಖ್ಯ ರಸ್ತೆಯಾಗಿದ್ದು, ಅಧಿಕ ವಾಹನ ಸಂಚಾರವಿದ್ದು ಪುರಸಭೆಯ ಸುಪರ್ದಿಯಲ್ಲಿದೆ.

ಬಿಎಂಐಸಿಎಪಿಎ ಅವರು ತಯಾರಿಸಿರುವ ಯೋಜನಾ ನಕ್ಷೆಯಲ್ಲಿ ಇದನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ.

ಹೀಗಾಗಿ ರಸ್ತೆ ಅಗಲೀಕರಣ ಕಾಮಗಾರಿಯ ಯೋಜನಾ ವರದಿ ಪರಿಶೀಲಿಸಿ, ರಸ್ತೆಯನ್ನು 80 ಅಡಿ ರಸ್ತೆಯಾಗಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು.

Megha
the authorMegha

Leave a Reply

error: Content is protected !!