NEWSಕೃಷಿನಮ್ಮರಾಜ್ಯ

ರೈತರಿಂದ 2,400 ರೂ.ಗೆ ಮೆಕ್ಕೆಜೋಳ ಖರೀದಿಸಬೇಕು: ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಂಎಸ್‌ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಡಿಸ್ಟಿಲರಿ ಕಂಪನಿಗಳು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಅವರು, ಈ ಬಾರಿ ರೈತರು ಮೆಕ್ಕೆಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದು ತಿಳಿಸಿದರು.

ಇನ್ನು ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು, ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರ್ಕಾರದಿಂದ 50 ರೂ. ಹೆಚ್ಚುವರಿ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದರು.

ಅದರಂತೆ ಮೆಕ್ಕೆಜೋಳ ಖರೀದಿಯ ಬಗ್ಗೆ ರೈತರು, ಡಿಸ್ಟಿಲರಿ ಕಾರ್ಖಾನೆ ಮಾಲೀಕರ ಜತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1,900 ರಿಂದ 2,100 ರೂ. ವರೆಗೆ ಇರುವುದರಿಂದ ಡಿಸ್ಟಿಲರಿ ಕಂಪನಿಗಳು, ಎಂಎಸ್‌ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು , ಪಶು ಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದು ಹೇಳಿದರು.

ಪೌಲ್ಟ್ರಿಗಳು 20 ಲಕ್ಷ ಮೆಟ್ರಿಕ್ ಟನ್‌ಗಿಂತ ಹೆಚ್ಚು ಖರೀದಿಸುತ್ತದೆ. ಪಶು ಆಹಾರ 4-5 ಲಕ್ಷ ಟನ್ ಹಾಗೂ 7-10 ಲಕ್ಷ ಟನ್ ಎಥೆನಾಲ್‌ಗಾಗಿ ಬಳಸುತ್ತಾರೆ. ಎಥೆನಾಲ್ ಹಾಗೂ ಎಂಎಸ್‌ಪಿ, ಎಫ್‌ಆರ್‌ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ ಎಂದರು.

ಇನ್ನು ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು, ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆಂದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ. ಏಕೆಂದರೆ ಅಂದು ರಾಜ್ಯದ ಸಂಸದರು ಅಲ್ಲಿಯೇ ಉಪಸ್ಥಿತರಿರುತ್ತಾರೆ ಎಂದು ಹೇಳಿದರು.

Megha
the authorMegha

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ