ಬೆಂಗಳೂರು: ಇಂದು ಕಾರ್ಗಿಲ್ ವಿಜಯ ದಿವಸ. ಇದು ಭಾರತದ ದಿಗ್ವಿಜಯದ ದಿನವೂ ಹೌದು. ಸವಾಲುಗಳ ನಡುವೆಯೂ ಸಾಹಸ ಮೆರೆದ ಭಾರತೀಯ ಸಶಸ್ತ್ರ ಪಡೆಗಳ ಬಲಿದಾನವನ್ನು ನಾನು ಹೆಮ್ಮೆಯಿಂದ ಸ್ಮರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ದೇಶಕ್ಕಾಗಿ ಮಡಿದ ಯೋಧರ ಕುಟುಂಬಗಳ ತ್ಯಾಗವನ್ನು ಮನಃಪೂರ್ವಕವಾಗಿ ಗೌರವಿಸುತ್ತೇನೆ ಎಂದು ತಮ್ಮ ಸಾಮಾಜಿಕ ಜಾಲತಾಣ ಟ್ವೀಟರ್ನಲ್ಲಿ ತಿಳಿಸಿದ್ದಾರೆ.