NEWSನಮ್ಮಜಿಲ್ಲೆನಮ್ಮರಾಜ್ಯ

ಸೆಪ್ಟೆಂಬರ್‌ರಲ್ಲಿ ಹೊರಡಿಸಿರುವ ನಿಯಮ 4 ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೂ ವಿಸ್ತರಿಸಿ: ಪ್ರತಿಭಟನಾಕಾರರ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇತ್ತೀಚೆಗೆ ನಡೆದ “ನಿಧಿ ಅಪ್ಕೆನಿಕಟ್” ಕಾರ್ಯಕ್ರಮದಂದು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಇಪಿಎಸ್ ಪಿಂಚಣಿದಾರರ 33ನೇ ಬೃಹತ್ ಪ್ರತಿಭಟನಾ ಸಭೆ ಜರುಗಿತು.

ಬಿಎಂಟಿಸಿ & ಕೆಎಸ್‌ಆರ್‌ಟಿಸಿ ಹಾಗೂ ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ನಿವೃತ್ತರ ಟ್ರಸ್ಟ್ ವತಿಯಿಂದ ಈ ಸಭೆಯನ್ನು ಆಯೋಜಿಸಲಾಗಿತ್ತು. ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. + ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ಇಪಿಎಸ್ ನಿವೃತ್ತರಿಗೆ, ಇಪಿಎಸ್ ವ್ಯಾಪ್ತಿಯಲ್ಲಿ ಬರದ ನಿವೃತ್ತರಿಗೆ 5000 ರೂ.ಗಳನ್ನು ಕೂಡಲೇ ನೀಡಬೇಕೆಂದು ಒತ್ತಾಯಿಸಲಾಯಿತು.

ಅಲ್ಲದೆ ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳನ್ನು ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿದ ಪ್ರತಿಭಟನಾಕಾರರು ಕಚೇರಿ ಆವರಣದಲ್ಲಿ ಹರತಾಳ ನಡೆಸಿ, ಧೀಕ್ಕಾರದ ಘೋಷಣೆಯೊಂದಿಗೆ ಮನವಿ ಪತ್ರವನ್ನು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆಯ(minister for labour & employment) ಸಚಿವರಾದ ಮುನ್ಸೂಕ್ ಮಾಂಡವೀಯ ಹಾಗೂ ಶೋಭಾ ಕರಂದ್ಲಾಜೆಯವರಿಗೆ ಉಲ್ಲೇಖಿಸಿ ಈ ಮನವಿ ಪತ್ರವನ್ನು ಕೂಡಲೇ ಕೇಂದ್ರ ಸಚಿವರಿಗೆ ಕಳುಹಿಸಿಕೊಡಬೇಕೆಂದು ಅಧಿಕಾರಿಗಳಿಗೆ ನೀಡಲಾಯಿತು.

ಪ್ರತಿಭಟನಾ ಸಭೆಯಲ್ಲಿ ಪ್ರತಿಪಟನಾಕಾರರು ಕೇಂದ್ರ ಸರ್ಕಾರ ಹಾಗೂ ಇಪಿಎಫ್ಒ ಅಧಿಕಾರಿಗಳಿಗೆ ಆಗ್ರಹಿಸಿದ ಅಂಶಗಳೇನೆಂದರೆ, ಚಳಿಗಾಲದ ಪಾರ್ಲಿಮೆಂಟ್ ಅಧಿವೇಶನ ಡಿಸೆಂಬರ್ 01.2025 ರಿಂದ ಆರಂಭವಾಗಲಿದ್ದು, ಈ ಅಧಿವೇಶನದಲ್ಲಿಯೇ ನಮ್ಮ ಬಹುದಿನಗಳ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದು. 10/10/2025 ರಂದು ವ್ಯವಸ್ಥಾಪಕ ನಿರ್ದೇಶಕರು ಕೆಎಸ್ಆರ್‌ಟಿಸಿ ಅವರು ಇಪಿಎಸ್ ನಿವೃತ್ತರ ಪರ ಉಲ್ಲೇಖಿಸಿರುವ ಪತ್ರಕ್ಕೆ ಸಂಬಂಧಿಸಿದಂತೆ, ಕೂಡಲೇ ಕ್ರಮ ಕೈಗೊಂಡು, ಎಲ್ಲ ಜಂಟಿ ಆಯ್ಕೆ ಪತ್ರಗಳನ್ನು ಪುನರ್ ಸ್ಥಾಪಿಸಿ, ಎಲ್ಲ ಇಪಿಎಸ್ ನಿವೃತ್ತರಿಗೆ ಅಧಿಕ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ಮದುರೈ ಉಚ್ಚ ನ್ಯಾಯಾಲಯವು 02/09/2025 ರಂದು, ಕೊಲ್ಕತ್ತಾ ಉಚ್ಚ ನ್ಯಾಯಾಲಯವು ದಿನಾಂಕ 14/11/2025 ರಂದು, ಇಪಿಎಸ್ ನಿವೃತ್ತರ ಪರ ನೀಡಿರುವ ಆದೇಶ ನಮಗೂ ಅನ್ವಯವಾಗಲಿದ್ದು, ಈ ಆದೇಶವನ್ನು ಕೂಡಲೇ ಅನುಷ್ಠಾನಗೊಳಿಸಿ, ಅಧಿಕ ಹೆಚ್ಚುವರಿ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯಸ್ಥ ಕಮಾಂಡರ್ ಅಶೋಕ ರಾವುತ್ ಹಾಗೂ ತಂಡದವರಿಗೆ ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಖಾತೆಯ ಸಚಿವರ ನಿರ್ದೇಶನದ ಮೇರೆಗೆ ಇಪಿಎಫ್ಒ ಅಧಿಕಾರಿಗಳು 17/10/2025 ರಂದು ನೀಡಿರುವ ಮುಚ್ಚಳಿಕೆ ಪತ್ರದ ಅನ್ವಯ ನ್ಯಾಯ ಸಮ್ಮತ ಅಧಿಕ ಹೆಚ್ಚುವರಿ ಪಿಂಚಣಿ + ಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯವನ್ನು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ಇಪಿಎಸ್ ನಿವೃತ್ತರಿಗೆ ಅಧಿಕ ಪಿಂಚಣಿ ನೀಡಬೇಕು ಎಂದರು.

ಜೇಮ್ ಷೇಡ್ಪುರದಲ್ಲಿರುವ M/s ಟಾಟಾ ಸ್ಟೀಲ್ ಪ್ರವೇಟ್ ಲಿಮಿಟೆಡ್ ಕಂಪನಿಯ ಇಪಿಎಸ್ ನಿವೃತ್ತರಿಗೆ ಅದರ ಟ್ರಸ್ಟ್ ರೂಲ್ಸ್ ಅನ್ವಯ ಅಧಿಕ ಪಿಂಚಣಿ ನೀಡಲು ಜಂಮ್ ಷೇಡ್ಪುರ ಇಪಿಎಫ್ಒ ಅಧಿಕಾರಿಗಳು ಸುತ್ತೋಲೆಯನ್ನು 11/09/2025 ರಂದು ಹೊರಡಿಸಿದ್ದು, ಈ ನಿಯಮವನ್ನು ನಮ್ಮ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೂ ಸಹಾ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಸಂಘದ ಸಂಘಟನಾ ಕಾರ್ಯದರ್ಶಿ ಮನೋಹರ್ ಎಲ್ಲ ಹೋರಾಟಗಾರರನ್ನು ಸ್ವಾಗತಿಸುವ ಮೂಲಕ ಪ್ರತಿಭಟನಾ ಸಭೆಗೆ ಚಾಲನೆ ನೀಡಿದರು. ಸಂಘದ ಅಧ್ಯಕ್ಷ ನಂಜುಂಡೇಗೌಡ, ಕಾರ್ಯಾಧ್ಯಕ್ಷ ಶಂಕರ ಕುಮಾರ್, ಕೆಎಸ್ಆರ್ ಟಿಸಿ ಚಿಕ್ಕಬಳ್ಳಾಪುರ ಟ್ರಸ್ಟ್ ಅಧ್ಯಕ್ಷ ಬ್ರಹ್ಮಚಾರಿ, ಸಾಮಾಜಿಕ ಕಾರ್ಯಕರ್ತ ಚಂದ್ರೇಗೌಡ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಅಂತಿಮವಾಗಿ ಇಪಿಎಫ್ಒ ಅಧಿಕಾರಿಗಳು ನಮ್ಮ ಮನವಿ ಪತ್ರ ಸ್ವೀಕರಿಸಿ ಮಾತನಾಡುತ್ತಾ, ಇಂದಿನ ಪ್ರತಿಭಟನಾ ಸಭೆಯ ಸಂಪೂರ್ಣ ವಿವರಗಳನ್ನು ಕೇಂದ್ರ ಸಚಿವರ ಕಾರ್ಯಾಲಯಕ್ಕೂ ಹಾಗೂ ನವದೆಹಲಿಯಲ್ಲಿನ ತಮ್ಮ ಮೇಲಧಿಕಾರಿಗಳಿಗೂ ಕಳಿಸಿ ಕೊಡುವುದಾಗಿ ತಿಳಿಸಿ, ಸ್ವೀಕೃತಿ ನೀಡಿದರು.

ಸಂಘದ ಪದಾಧಿಕಾರಿಗಳಾದ ರಂಗನಾಥ್, ನಾಗರಾಜು, ರುಕ್ಮೇಶ್, ಕೃಷ್ಣಮೂರ್ತಿ ಇದ್ದು, ಸಭೆಯ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟರು. ಈ ಪ್ರತಿಭಟನಾ ಸಭೆ ಅತ್ಯಂತ ಆವೇಶಭರಿತವಾಗಿತ್ತು. ಕೇಂದ್ರ ಸರ್ಕಾರಕ್ಕೆ ಹಾಗೂ ಇಪಿಎಫ್ಒ ಅಧಿಕಾರಿಗಳಿಗೆ ಇದೊಂದು ಎಚ್ಚರಿಕೆ ಗಂಟೆ ಆಗಿದೆ ಎಂದು ಬಿಎಂಟಿಸಿ & ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!