NEWSನಮ್ಮರಾಜ್ಯರಾಜಕೀಯ

ಜನತೆಯ ಆಶೋತ್ತರಗಳಿಗೆ ಕೊಳ್ಳಿ ಇಟ್ಟ ಸರ್ಕಾರ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರ ಮಾತ್ರವಲ್ಲ, ಜನತೆಯು ಕೂಡ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವಾಗ ಬೊಕ್ಕಸ ಹಾಗೂ ಜನಸಾಮಾನ್ಯನ ಮೇಲೆ ಹೊರೆ ಹೇರುವ ಮೂಲಕ ‘ಶಾಸಕರಿಗೆ ಉಡುಗೊರೆ, ಜನತೆಗೆ ಬರೆ’ ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ ನಡವಳಿಕೆಯನ್ನು ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕೊರೊನಾ ಸಂಕಷ್ಟ ಸಮಯದಲ್ಲಿ ಬದುಕಿಗಾಗಿ ಜನತೆ ಹೋರಾಟ ಮಾಡುತ್ತಿದ್ದರೆ, ವರ್ಷಾಚರಣೆಯ ಸಂಭ್ರಮದಲ್ಲೂ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ತನ್ಮಯವಾಗಿರುವ ಬಿಜೆಪಿ ಸರ್ಕಾರ 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಉಡುಗೊರೆ ನೀಡುವ ಮೂಲಕ ಜನತೆಯ ಆಶೋತ್ತರಗಳಿಗೆ ಕೊಳ್ಳಿ ಇಟ್ಟಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರಕ್ಕೆ ಸಾಮಾನ್ಯರ ಹಿತ ಮುಖ್ಯವೋ? ಕುರ್ಚಿ ಉಳಿಸಿಕೊಳ್ಳಲು ಶಾಸಕರ ಹಿತ ಮುಖ್ಯವೋ? ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರ ತೃಪ್ತಿಪಡಿಸುವ ಅನಾಚಾರ ಪ್ರದರ್ಶಿಸಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯ ಎದುರಿಸುತ್ತಿರುವ ಇಂತಹ ಸಂಕಷ್ಟದ ಸಮಯದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಗಾದಿಯ ಮೇಲೆ ಸವಾರಿ ಮಾಡುವುದು ವಿಹಿತವೇ ಎಂಬುದನ್ನು ಶಾಸಕರು ಆತ್ಮಸಾಕ್ಷಿಗೆ ಪ್ರಶ್ನೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು