NEWSನಮ್ಮರಾಜ್ಯರಾಜಕೀಯ

ಬಿಐಇಸಿಯ ಕೋವಿಡ್ ಆರೈಕೆ ಕೇಂದ್ರ ಲೋಕಾರ್ಪಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ(BIEC)ದಲ್ಲಿ ನಿರ್ಮಿಸಲಾಗಿರುವ ಕೋವಿಡ್ ಆರೈಕೆ ಕೇಂದ್ರವನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಮೇಯರ್‌ ಗೌತಮ್‌ ಕುಮಾರ್‌ ಉದ್ಘಾಟಿಸಿದರು.

ಉಪ ಮೇಯರ್‌ ರಾಮಮೋಹನ ರಾಜು, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್, ಪಾಲಿಕೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ಸರ್ಕಾರದ ಕಾರ್ಯದರ್ಶಿ(ತೋಟಗಾರಿಕೆ ಇಲಾಖೆ) ಹಾಗೂ ಕೋವಿಡ್ ಆರೈಕೆ ಕೇಂದ್ರದ ನಾಯಕ ರಾಜೇಂದ್ರ ಕುಮಾರ್ ಕಟಾರಿಯಾ ಇತರರು ಇದ್ದರು.

  • ಬಿಐಇಸಿ ಕೇಂದ್ರದ ಪ್ರಮುಖ ಅಂಶಗಳು
  • ಬಿಐಇಸಿ ಕೇಂದ್ರದಲ್ಲಿ ನಿರ್ಮಿಸಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಒಟ್ಟು 5,000 ಹಾಸಿಗೆಗಳು ಆರೈಕೆಗೆ ಸಿದ್ಧವಾಗಿದ್ದು, ಜೊತೆಗೆ 1,500 ಹಾಸಿಗೆಗಳನ್ನು ಪ್ರತ್ಯೇಕವಾಗಿ ವೈದ್ಯರು ಮತ್ತು ಇತರ ಸಿಬ್ಬಂದಿಗೆ ಹಾಲ್ ಸಂಖ್ಯೆ-01ರಲ್ಲಿ ಮೀಸಲಿರಿಸಲಾಗಿದೆ. ಇಂದು ಹಾಲ್ ಸಂಖ್ಯೆ-05 ರಲ್ಲಿ 1,536 ಹಾಸಿಗಳನ್ನು ಸೋಂಕಿತರ ಆರೈಕೆಗೆ ಮುಕ್ತಗೊಳಿಸಲಾಗುತ್ತಿದೆ.
  • ಹಾಲ್ ಸಂಖ್ಯೆ-05 ರಲ್ಲಿ 24 ವಾರ್ಡ್ ಗಳನ್ನು ಸ್ಥಾಪಿಸಲಾಗಿದೆ.
  • ಊಟದ ಕೊಠಡಿಯಲ್ಲಿ ಒಂದು ಬಾರಿಗೆ 350 ಮಂದಿ ಆಹಾರ ಸೇವಿಸಬಹುದಾಗಿದೆ.
  • ಮನರಂಜನಾ ಕೊಠಡಿಯಲ್ಲಿ ಟಿವಿ, ಕೂರಲು ಹಾಸನದ ವ್ಯವಸ್ಥೆ, ಸೋಫಾ, ಚೇರ್ ಹಾಗೂ ಫ್ಯಾನ್ ವ್ಯವಸ್ಥೆ ಕಲ್ಪಿಸಲಾಗಿದೆ.
  • ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಗಳ ವ್ಯವಸ್ಥೆ ಕಲ್ಪಿಸಲಾಗಿದೆ.
  • ಸ್ನಾನ ಮಾಡಲು, ಮೂತ್ರ ವಿಸರ್ಜನೆ, ಕೈ ತೊಳೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
  • ಕೋವಿಡ್ ಆರೈಕೆ ಕೇಂದ್ರದಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ನಿಯಂತ್ರಣ ಕೊಠಡಿ ಸ್ಥಾಪಿಸಲಾಗುತ್ತಿದೆ.
  • ಕೋವಿಡ್ ಪಾಸಿಟಿವ್ ಆಗಿರುವವರು ನೊಂದಣಿ/ದಾಖಲು ಮಾಡಿಕೊಳ್ಳಲು ಪ್ರತ್ಯೇಕ ಕೊಠಡಿ ನಿರ್ಮಿಸಲಾಗಿದೆ.
  • ಕೋವಿಡ್ ಆರೈಕೆ ಕೇಂದ್ರವನ್ನು ನಿರ್ವಹಣೆ ಮಾಡಲು ಪ್ರತ್ಯೇಕ ಸಿಬ್ಬಂದಿ ವ್ಯವಸ್ಥೆ ಮಾಡಲಾಗಿದೆ.
  • ಹೌಸ್ ಕೀಪಿಂಗ್, ಲ್ಯಾಂಡರಿ ವ್ಯವಸ್ಥೆಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
  • ಸುರಕ್ಷತಾ ಕ್ರಮವಾಗಿ ಮಾರ್ಷಲ್, ಕೆ.ಎಸ್.ಆರ್.ಪಿ ಪ್ಲಟೂನ್ ಸಿಬ್ಬಂದಿ, ಅಗ್ನಿ ಶಾಮಕ ವಾಹನಗಳನ್ನು ಇರಿಸಲಾಗಿದೆ.
  • ವಿದ್ಯುತ್ ಸಮಸ್ಯೆ ಆಗದಂತೆ ಕೆ.ಪಿ.ಟಿ.ಸಿ.ಎಲ್ ನಿಂದ ಪ್ರತ್ಯೇಕ ಲೈನ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
  • ಕೋವಿಡ್ ಸೋಂಕಿತ ರೋಗಿಗಳಿಗೆ ಸರ್ಕಾರ ಸೊತ್ತೋಲೆ ಹೊರಡಿಸಿರುವ ಆಹಾರದ ಮೆನುವಿನ ಪ್ರಕಾರ ಕಾಲಕಾಲಕ್ಕೆ ಆಹಾರ ಒದಗಿಸಲಾಗುತ್ತದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು