NEWSಆರೋಗ್ಯರಾಜಕೀಯ

ಅಧಿಕಾರಿಗಳ ಖಡಕ್‌ ಎಚ್ಚರಿಕೆಗೆ ಬೆಚ್ಚಿದ ಆಸ್ಪತ್ರೆ: ಕೊರೊನಾ ಸೋಂಕಿತರಿಂದ ವಸೂಲಿ ಮಾಡಿದ್ದ ಹಣ ವಾಪಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಿರಿಯ ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳ ತಂಡದ ಖಡಕ್‌ ಎಚ್ಚರಿಕೆಗೆ ಬೆದರಿದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಕೊರೊನಾ ಸೋಂಕಿತರಿಂದ ಪಡೆದಿದ್ದ ಹೆಚ್ಚುವರಿ 24 ರೂಪಾಯಿಯನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಿದೆ.

ಹೌದು! ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ಮತ್ತು ಐಜಿಪಿ ಡಿ.ರೂಪಾ ನೇತೃತ್ವದ ತಂಡ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೊನಾ ಚಿಕಿತ್ಸೆಗಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ 24 ಲಕ್ಷ ರೂ.ಗಳನ್ನು ರಾಜರಾಜೇಶ್ವರಿ ನಗರ ಸಮೀಪದ ಆಸ್ಪತ್ರೆ ಸೋಮವಾರ ಹಿಂತಿರುಗಿಸಿದೆ.

ಇನ್ನುಯಾವುದೇ ಆಸ್ಪತ್ರೆಯಾದರೂ ಸರ್ಕಾರ ನಿಗದಿ ಪಡಿಸಿರುವ ದರಕ್ಕಿಂತ ಹೆಚ್ಚು  ಹಣ ಸುಲಿಗೆ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ರೂಪಾ ಎಚ್ಚರಿಗೆ ನೀಡಿದ್ದಾರೆ.

ಹಣ ವಸೂಲಿ ಬಗ್ಗೆ ಆಸ್ಪತ್ರೆ ವಿರುದ್ಧ ಹಲವು ದೂರುಗಳು ಬಂದಿದ್ದವು. ಕೊರೊನಾ ಚಿಕಿತ್ಸೆಗೆ ದಾಖಲಿಸಿಕೊಳ್ಳುವ ಮುನ್ನವೇ 1ಲಕ್ಷದಿಂದ  2 ಲಕ್ಷ ರೂ.ವರೆಗೂ ಹಣವನ್ನು ಮುಂಗಡವಾಗಿ ಪಡೆಯುತ್ತಿದ್ದರು. ಸಂಪೂರ್ಣ ಚಿಕಿತ್ಸೆಗೆ 4-5 ಲಕ್ಷ ರೂ. ವೆಚ್ಚವಾಗಲಿದೆ ಎಂದು ರೋಗಿಗಳಿಗೆ ಆಸ್ಪತ್ರೆ ಸಿಬ್ಬಂದಿ ಹೇಳಿದ್ದರು. ಇದರಿಂದ ಸೋಂಕಿತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ದುಬಾರಿ ಹಣ ವಸೂಲಿ ಬಗ್ಗೆ ಮಾಹಿತಿ ತಿಳಿದ ಕೂಡಲೇ ಆಸ್ಪತ್ರೆಗೆ ನಮ್ಮ ತಂಡ ತೆರಳಿ ಪರಿಶೀಲಿಸಿದಾಗ ಹಣ ವಸೂಲಿ ಸಂಬಂಧ ದಾಖಲೆಗಳು ಸಿಕ್ಕಿದ್ದವು ಎಂದು ಹೇಳಿದ್ದಾರೆ.

ನಮ್ಮ ತಂಡಕ್ಕೆ 3 ಖಾಸಗಿ ಆಸ್ಪತ್ರೆಗಳ ಹೊಣೆಗಾರಿಕೆ ಇದೆ. ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರದ ಸೂಚನೆಗಳನ್ನು ಆಸ್ಪತ್ರೆಗಳು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪ್ರತಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲಾಗುತ್ತಿದೆ. ಆ ಪೈಕಿ ಒಂದು ಆಸ್ಪತ್ರೆಯಲ್ಲಿ ಸೋಂಕಿತರಿಂದ ಹಣ ವಸೂಲಿ ಮಾಡಿದ ಪ್ರಕರಣ ದಾಖಲೆ ಸಮೇತ ಪತ್ತೆಯಾಗಿದ್ದರಿಂದ ಆ ಹಣವನ್ನು ವಾಪಸ್‌ ಕೊಡಿಸಿದ್ದೇವೆ ಎಂದು ರೂಪಾ ತಿಳಿಸಿದ್ದಾರೆ.

ಈಗ ಆಸ್ಪತ್ರೆ ತಾನು ಪಡೆದಿದ್ದ ಹೆಚ್ಚುವರಿ ಹಣವನ್ನು 22 ಸೋಂಕಿತರಿಗೆ ಮರಳಿಸಿದೆ. ಇನ್ನುಳಿದ 4-5 ಮಂದಿ ಬ್ಯಾಂಕ್ ದಾಖಲೆಗಳಲ್ಲಿ ವ್ಯತ್ಯಾಸವಾಗಿದೆ. ಆದಷ್ಟು ಶೀಘ್ರವೇ ಅದನ್ನು ಪರಿಶೀಲಿಸಿ ಅವರಿಗೂ ಹಣ ಜಮೆ ಮಾಡಿಲಸಾಲಾಗುವುದು ಎಂದು ಹೇಳಿದ್ದಾರೆ.

 

1 Comment

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು