ಮಂಡ್ಯ: ಕೊರೊನಾಗೆ ಇಂದು ರಾಜ್ಯದಲ್ಲಿ ಇಬ್ಬರು ವೈದ್ಯರು ಬಲಿಯಾಗಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಖಾಸಗಿ ಕ್ಲಿನಿಕ್ ನಡೆದುತ್ತಿದ್ದ ಮೈಸೂರು ಮೂಲದ 60 ವರ್ಷದ ವೈದ್ಯ ಮತ್ತು ಹಾಸನ ನಗರದ ಖಾಸಗಿ ನರ್ಸಿಂಗ್ ಹೋಂನ 75 ವರ್ಷದ ವೈದ್ಯರು ಕೊರೊನಾದಿಂದ ಕೊನೆಯುಸಿರೆಳೆದಿದ್ದಾರೆ.
ನಿನ್ನೆ (ಸೋಮವಾರ) ಕೆ.ಆರ್.ಪೇಟೆ ವೈದ್ಯರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಅವರನ್ನು ಕೋವಿಡ್ ಕೇರ್ ಸೆಂಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೆ ಇಂದು ಮೃತಪಟ್ಟಿದ್ದಾರೆ.
ಇನ್ನು ಹಾಸನದ 75 ವರ್ಷದ ವೈದ್ಯರಿಗೂ ಸೋಂಕು ಕಾಣಿಸಿಕೊಂಡಿದ್ದು ಅವರನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಹ ಕೊನೆಯುಸಿರೆಳೆದಿದ್ದಾರೆ.
ಇದರಿಂದ ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮತ್ತು ಪಡೆಯುತ್ತಿರುವ ರೋಗಿಗಳಲ್ಲಿ ಆತಂಕ ಮನೆ ಮಾಡಿದೆ.
ಮೃತಪಟ್ಟ ವೈದ್ಯರ ಸಂಪರ್ಕದಲ್ಲಿದ್ದವರ ಗಂಟಲು ದ್ರವ ಮತ್ತು ರಕ್ತ ಮಾದರಿಯನ್ನು ತೆಗೆದಕೊಂಡು ಹೋಗಿದ್ದು, ಸದ್ಯ ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.