NEWSನಮ್ಮರಾಜ್ಯಸಂಸ್ಕೃತಿ

ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದಿದ್ದ ಬಾಬಾ ಸಾಹೇಬರು: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಹೇಳಿದರು.

ಇನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಎಂತಹಾ ಸಂವಿಧಾನದ ಅಗತ್ಯವಿದೆ ಎಂದು ಯೋಚಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ, ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದರು.

ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ನಿತ್ಯ ಬೋಧಿಸಲಾಗುತ್ತಿದೆ. ಸಂವಿಧಾನವು ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದು ಹೇಳಿದರು.

ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ನಾವು ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು.

ಈ ವೇಳೆ ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದಿದ್ದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದೂ ಹೇಳಿದ್ದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದ್ದರು ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
BMS ಸಂಘಟನೆಯ ಹೋರಾಟ: ನೌಕರರ ಧ್ವನಿಗೆ ಸ್ಪಂದಿಸಿದ ಸರ್ಕಾರ- ಸೂಕ್ತ ವ್ಯವಸ್ಥೆ ಮಾಡದೆ ಬಿಟ್ಟಿ ಸಲಹೆ ಕೊಟ್ಟ ಎಂಡಿ ಅಕ್ರಮ... NWKRTC: ಬ್ಯಾಡಗಿ ಬಸ್‌ ನಿಲ್ದಾಣದಲ್ಲಿ ಎರಡು ಬಸ್‌ಗಳ ಮಧ್ಯೆ ಸಿಲುಕಿದ ಕಾಲೇಜು ವಿದ್ಯಾರ್ಥಿ- ಚಿಂತಾಜನಕ ಸ್ಥಿತಿ ಸಾರಿಗೆ ನೌಕರರ ಮುಷ್ಕರ: ಆತ್ಮಹತ್ಯೆಗೆ ಯತ್ನಿಸಿದ ನರಸಂಪೇಟೆ ಡಿಪೋ ಚಾಲಕ ಶಂಕರ್ ಗೌಡ್ ಚಿಕಿತ್ಸೆ ಫಲಿಸದೆ ಮೃತ ಬೇಡಿಕೆ ಈಡೇರಿಸದ ಸರ್ಕಾರ: ಸಾರಿಗೆ ನೌಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ನಡುವೆ ಹೋರಾಟ KSRTC ನೌಕರರ ಏಪ್ರಿಲ್‌ ತಿಂಗಳ ವೇತನ ಏ.30ರಂದೆ ಪಾವತಿಸಲು ಎಂಡಿ ಆದೇಶ ಎಸ್‌ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾದರೂ ಹಾಜರಾಗಿಲ್ಲ ಅಂತ ಅಂಧ ವಿದ್ಯಾರ್ಥಿನಿಯ ಫೇಲ್ ಮಾಡಿದ ಮಂಡಳಿ ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ - ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ SSLC ಪರೀಕ್ಷಾ ಫಲಿತಾಂಶ ಅಧಿಕೃತ ಪ್ರಕಟ: ಶೇ.94.1 ತೇರ್ಗಡೆ ಹುಡುಗಿಯರೇ ಈ ಬಾರಿಯೂ ಮೇಲುಗೈ KSRTC: ನೌಕರರ ವೇತನ ಹೆಚ್ಚಳ ಸಂಬಂಧದ ಹೋರಾಟ ನಿಲ್ಲುವುದಿಲ್ಲ ಹೈ ಕೋರ್ಟ್‌ ನಿರ್ದೇಶನದಂತೆ ಮುಂದುವರಿಯಲಿದೆ- ಚಂದ್ರಶೇಖರ... ಏ.29ರಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ 2024ರ ಜ.1ರಿಂದ ನೌಕರರ ವೇತನ ಹೆಚ್ಚಳ, ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ...